ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಕನ್ನಯ್ಯ ಅವರ ಕಗ್ಗೊಲೆ ಕೇವಲ ಅಲ್ಲಿಗೆ ಸೀಮಿತವಾಗಲ್ಲ. ಇಡೀ ಹಿಂದೂ ಸಮಾಜಕ್ಕೆ ಇಡೀ ದೇಶದಲ್ಲೇ ಇದು ಸವಾಲಾಗಿದೆ ಎಂದು ಹೇಳಿದರು.
ನಮ್ಮ ಶ್ರದ್ಧಾಕೇಂದ್ರಗಳು ನೂರಾರು ವರ್ಷದಿಂದ ಅಪವಿತ್ರಗೊಂಡಿವೆ. ಅಯೋದ್ಯೆಯಲ್ಲಿದ್ದ ರಾಮಮಂದಿರ ಧ್ವಂಸ ಮಾಡಿ ಬಾಬರಿ ಮಸೀದಿ ಕಟ್ಟಿದ್ದರು. ಇದು ಗೊತ್ತಿದ್ದರೂ ಕೂಡ ಅಪಮಾನವನ್ನು ನೂರಾರು ವರ್ಷ ಸಹಿಸಿಕೊಂಡು ಬಂದಿದ್ದೆವು.ಇಂದಿಗೂ ಕಾಶಿಯಲ್ಲಿ ವಿಶ್ವನಾಥನ ಲಿಂಗ ನೀರಿನಲ್ಲಿತ್ತು. ಮಥುರಾದಲ್ಲಿ ಶ್ರೀಕೃಷ್ಣನ ಜನ್ಮ ಸ್ಥಳದ ದೇವಾಲಯ ಧ್ವಂಸ ಮಾಡಿ ಮಸೀದಿ ಕಟ್ಟಿದ್ದಾರೆ. ಈ ಮೂರು ದೇವಸ್ಥಾನಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ.ಹಿಂದು ಸಮಾಜ ಅಪಮಾನ ಸಹಿಸಿಕೊಂಡು ಶಾಂತಿಯಿಂದ ಇರುವಾಗ ನೂಪುರ್ ಶರ್ಮಾ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ದೇಶಗಳಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಯಿತು. ಆದರೆ ಇದೀಗ ರಾಜಸ್ಥಾನದಲ್ಲಿ ಬಡ ಟೈಲರ್ ಕೊಲೆ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರಮೋದಿಯನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ ಇದು ಹಿಂದು ಸಮುದಾಯಕ್ಕೆ ಆದ ಅಪಮಾನ ಹಾಗೂ ಸವಾಲು ಎಂದು ಹೇಳಿದರು.
ಇಷ್ಟೆಲ್ಲಾ ಅವಮಾನ,ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಆಗಿದ್ದು ಆಯಿತು ಎನ್ನುತ್ತಿದ್ದಾರೆ.ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾಗಾಂಧಿ, ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಬಾಯಿ ಬಿಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಲೆಗಡುಕರು ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಈಗಿನ ಕಾನೂನಿನಲ್ಲಿ ಅವರ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳಲು ಅವಕಾಶವಿಲ್ಲ. ಈಗಿನ ಕಾನೂನಿನಲ್ಲಿ ಅವರಿಗೆ ಜಾಮೀನು ಸಿಗುವ ಸಾಧ್ಯತೆಯಿದೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಅಧಿವೇಶನ ಕರೆದು ಕಾನೂನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಕೊಲೆಗಡುಕರು ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡ ಮೇಲೆ ವಿಚಾರಣೆಯ ಅಗತ್ಯವಿಲ್ಲ. ಕೂಡಲೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಅಥವಾ ಗಲ್ಲಿಗೇರಿಸಬೇಕು. ಕನ್ನಯ್ಯ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ ಎಂದರು.
ನೂಪುರ್ ಶರ್ಮಾ ಅವರ ಹೇಳಿಕೆಯಿಂದ ದೇಶದಲ್ಲಿ ದೊಡ್ಡ ಪ್ರತಿಭಟನೆ ಮಾಡುತ್ತಾರೆ ಎಂದರೆ ಕನ್ನಯ್ಯ ರೀತಿಯಲ್ಲೇ ಮೋದಿಯನ್ನು ಕೊಲೆ ಮಾಡುತ್ತೇವೆ ಎಂದವರನ್ನು ಸುಮ್ಮನೆ ಬಿಡಬೇಕಾ. ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಮದರಸಾಗಳನ್ನು ಬ್ಯಾನ್ ಮಾಡಬೇಕು. ಇಲ್ಲವೇ ಅಲ್ಲಿ ದೇಶಭಕ್ತಿ ಮೂಡಿಸುವ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು.
ಕೆ.ಎಸ್.ಈಶ್ವರಪ್ಪ, ಶಾಸಕರು