Malenadu Mitra
ರಾಜ್ಯಶಿವಮೊಗ್ಗ

ಸೆ.೨ ಕ್ಕೆ ನಗರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ , ನೂತನ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೆಪ್ಟಂಬರ್ ೦೨ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದ  ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಪ್ರಸಕ್ತ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಪೂರ್ಣಗೊಳ್ಳುತ್ತಿರುವ, ಲೋಕಾರ್ಪಣೆಗೆ ಸಿದ್ಧಗೊಂಡಿರುವ ಕಟ್ಟಡಗಳು, ನೂತನವಾಗಿ ಮಂಜೂರಾಗಿ ಶಂಕುಸ್ಥಾಪನೆಗೆ ಸಿದ್ಧವಾಗಿರುವ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಅವರು, ಲೋಕಾರ್ಪಣೆಗೆ ಸಿದ್ಧವಾಗಿರುವ ಕಟ್ಟಡಗಳು, ಸಮುದಾಯ ಭವನಗಳು, ಶಾಲೆ-ಅಂಗನವಾಡಿ ಕಟ್ಟಡಗಳು, ರಸ್ತೆಗಳು, ಕೆರೆಗಳ ವಿವರವಾದ ಮಾಹಿತಿಯನ್ನು ಆ.೨೫ ರೊಳಗಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸೆಪ್ಟಂಬರ್ ೦೨ ರಂದು ಬೆಳಿಗ್ಗೆ ೧೧ಗಂಟೆಗೆ ನಗರದ ಫ್ರೀಡಂಪಾರ್ಕ್ ಆವರಣದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಚಟುವಟಿಕೆಗಳಿಗೆ ತಲಾ ೫೨ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಅವಶ್ಯಕವಾಗಿರುವ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಿದ್ದಾರೆ ಎಂದ ಅವರು, ಈಗಾಗಲೇ ಕೆಲವು ಕಾರ್ಯಕ್ರಮಗಳನ್ನು ಆರಂಭಗೊಳಿಸಲಾಗಿವೆ. ಇನ್ನೂ ಕೆಲವು ಉದ್ಘಾಟನೆಗೆ ಸಿದ್ಧವಾಗಿವೆ ಎಂದರು.

ವಿಶೇಷವಾಗಿ ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸ್ಮಾರ್ಟ್‌ಸಿಟಿ ಕಾಮಗಾರಿಗಳು, ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಕಾರ್ಯಕ್ರಮಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಳ್ಳಲಿವೆ. ಅದಕ್ಕಾಗಿ ಆಹ್ವಾನಪತ್ರಿಕೆಯೊಂದಿಗೆ ಇಲಾಖಾ ಕಾರ್ಯಕ್ರಮಗಳ ಎಲ್ಲಾ ವಿವರಗಳನ್ನು ಹೊಂದಿರುವ ಕಿರುಹೊತ್ತಿಗೆಯನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ||ನಾಗೇಂದ್ರ ಎಫ್.ಹೊನ್ನಳ್ಳಿ, ಮೇಯರ್ ಸುನಿತಾಅಣ್ಣಪ್ಪ, ಸೂಡಾ ಅಧ್ಯಕ್ಷ ನಾಗರಾಜ್, ಮೂಕಪ್ಪ ಕರಭೀಮಣ್ಣನವರ್, ಚಿದಾನಂದ ಎಸ್.ವಟಾರೆ, ಮಾಯಣ್ಣಗೌಡ, ದೊಡ್ಡಗೌಡರ್, ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Ad Widget

Related posts

ವಕ್ಫ್ ಆಸ್ತಿ ವಿವಾದ : ಸಿಎಂ ಸ್ಥಾನವೇ ಹೋದಿತು – ಸಿದ್ದುಗೆ ಈಶ್ವರಪ್ಪ ಎಚ್ಚರಿಕೆ

Malenadu Mirror Desk

ಕಾಗೋಡು ಚಳವಳಿ-ರಾಜಕಾರಣ ಮುಂದಣ ಹೆಜ್ಜೆ ಏ,18 ಕ್ಕೆ ಸಾಗರದಲ್ಲಿ ಐತಿಹಾಸಿಕ ಸತ್ಯಾಗ್ರಹ ಸ್ಮರಣೆ

Malenadu Mirror Desk

ಶಿವಮೊಗ್ಗದಲ್ಲಿ ಏರುಗತಿಯಲ್ಲಿ ಕೊರೊನ,ಯಾವ ತಾಲೂಕುಗಳಲ್ಲಿ ಎಷ್ಟು ಪಾಸಿಟಿವ್? ಇಲ್ಲಿದೆ ಮಾಹಿತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.