ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್‌ನಲ್ಲಿ ನಡೆದಿದೆ.
ಮಂಜುಳಾ (35) ಕೊಲೆಯಾದ ಮಹಿಳೆ. ಮೆಸ್ಕಾಂನಲ್ಲಿ ಹಿರಿಯ ಸಹಾಯಕ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ (42) ಕೊಲೆಯ ಆರೋಪಿ
ಮಂಗಳವಾರ ತಡರಾತ್ರಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ದಿನೇಶ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ಕೊನೆಗೆ ತಾನೂ ಆತ್ಮಹತ್ಯೆಗೆ ಯತ್ನಿದ್ದಾರೆ. ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಕೂಡಲೇ ಗಂಭೀರ ಗಾಯಗೊಂಡಿದ್ದ ದಿನೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.