Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಉದ್ಘಾಟನೆ, ಮಾದಕ ವಸ್ತು ವಿರೋಧಿ ಅಭಿಯಾನ

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ನೂತನ ಸಂಘದ ಉದ್ಘಾಟನೆ, ಪದಗ್ರಹಣ ಸಮಾರಂಭ ಹಾಗೂ ಮಾದಕ ವಸ್ತು ವಿರೋಧಿ ಅಭಿಯಾನಕ್ಕೆ ಸೆ. ೧೬ ರಂದು ಬೆಳಗ್ಗೆ ೧೧ ಗಂಟೆಗೆ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಚಾಲನೆ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದರು.
ಪತ್ರಿಕಾಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರ ಯೋಗಕ್ಷೇಮದ ದೃಷ್ಟಿಯಿಂದ ಪತ್ರಕರ್ತರ ಸಂಘವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಪ್ರಸ್ತುತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ಅವರ ಆರ್ಥಿಕ,ಆರೋಗ್ಯ ಮತ್ತು ಭೌದ್ದಿಕ ಸುಸ್ಥಿರತೆ ಗಮನದಲ್ಲಿಟ್ಟುಕೊಂಡು ಸಂಘವನ್ನು ಸ್ಥಾಪಿಸಲಾಗಿದೆ ಎಂದರು.
ಪತ್ರಕರ್ತರು ಆರ್ಥಿಕವಾಗಿ ಅಷ್ಟೇನೂ ಉತ್ತಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಯಾವ ಇತರೆ ಉದ್ಯೋಗಗಳನ್ನು ಮಾಡಬಹುದು ಎಂಬುದರ ಬಗ್ಗೆ ಆರ್ಥಿಕ ತಜ್ಞರ ಜೊತೆ ಸಮಾಲೋಚನೆಯನ್ನು ಸಂಘ ಏರ್ಪಡಿಸಲಿದೆ. ಹಾಗೆಯೇ ಸದಾ ಒತ್ತಡದಲ್ಲಿರುವ ಪತ್ರಕರ್ತರು ಆರೋಗ್ಯದ ಕಡೆ ಹೆಚ್ಚು ಗಮನಹರಿಸುತ್ತಿಲ್ಲ. ಈ ನಿಟ್ಟಿನಲ್ಲಿಯೂ ಸಂಘ ಕೆಲಸ ಮಾಡಲಿದ್ದು, ಈಗಾಗಲೇ ಹೆಲ್ತ್ ಕಾರ್ಡ್ ವಿತರಿಸಲಾಗುತ್ತಿದೆ ಎಂದರು.
ಪತ್ರಿಕೋದ್ಯಮ ಹೊಸ ಆಯಾಮ ಕಂಡುಕೊಳ್ಳುತ್ತಿದ್ದಂತೆಯೇ ಪತ್ರಕರ್ತರು ಹೊಸ ಆಲೋಚನೆಗಳನ್ನು ರೂಪಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಂಘ ಆಗಾಗ ಅರಿವಿನ ವಿಸ್ತಾರ ಕಾರ್ಯಕ್ರಮ ಆರೋಜಿಸಲಿದೆ. ಮುಖ್ಯವಾಗಿ ನಮ್ಮ ನಡೆ ಸಮಾಜದ ಕಡೆ ಎಂಬ ಧ್ಯೇಯ ವಾಕ್ಯದೊಡನೆ ಅಂದು ಮಾದಕ ವಸ್ತು ವಿರೋಧಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದರು.
ಕಾರ್ಯಕ್ರಮವನ್ನು ಹೆಗ್ಗೋಡಿನ ಚರಕ ಪ್ರಸನ್ನ ಉದ್ಘಾಟಿಸುವರು. ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ ೧೦ ಗಂಟೆಗೆ ಮಾದಕ ವಸ್ತು ವಿರೋಧಿ ಅಭಿಯಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡುವರು. ಸರ್ಜಿ ಫೌಂಡೇಷನ್ ನ ಡಾ. ಧನಂಜಯ ಸರ್ಜಿ ಹೆಲ್ತ್ ಕಾರ್ಡ್ ವಿತರಿಸುವರು. ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಸಂಘದ ಗೌರವಾಧ್ಯಕ್ಷ ಎಸ್. ಚಂದ್ರಕಾಂತ್ ಉಪಸ್ಥಿತರಿರುವರು ಎಂದರು.
ಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಎಸ್. ಚಂದ್ರಕಾಂತ್, , ಉಪಾಧ್ಯಕ್ಷ ಕೆ. ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚನಕಟ್ಟೆ ಕಾರ್ಯದರ್ಶಿ ಗೋ.ವ. ಮೋಹನಕೃಷ್ಣ, ಖಜಾಂಚಿ ಶಿವಮೊಗ್ಗ ನಂದನ್ ಉಪಸ್ಥಿತರಿದ್ದರು.

Ad Widget

Related posts

ಶಿವಮೊಗ್ಗದಲ್ಲಿ ಸಾವಿರ ಗಡಿದಾಟಿದ ಗುಣಮುಖರ ಸಂಖ್ಯೆ, 15 ಸಾವು, ಸಾಗರದಲ್ಲಿ ಯಥಾಸ್ಥಿತಿ

Malenadu Mirror Desk

ಹಿಜಾಬ್ ತೀರ್ಪು ಸ್ವಾಗತ, ಬೆಂಬಲಿಸುತ್ತಿದ್ದವರು ಮಕ್ಕಳಿಗೆ ಮಾರ್ಗದರ್ಶನ ನೀಡಲಿ ಎಂದ ಸಚಿವ ಈಶ್ವರಪ್ಪ

Malenadu Mirror Desk

ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವಿರಬೇಕು: ಐಎಎಸ್ ಅಧಿಕಾರಿ ತೇಜಸ್ವಿನಾಯ್ಕ್, ತರಳೀಮಠದಲ್ಲಿ ಮೌಲ್ಯಾಧರಿತ ಶಿಕ್ಷಣ ಕುರಿತ ವಿಚಾರಸಂಕಿರಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.