Malenadu Mitra
ರಾಜ್ಯ ಶಿವಮೊಗ್ಗ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮುರುಘಾ ಶರಣರಿಗೆ ಚಿಕಿತ್ಸೆ

ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿತರಾಗಿರುವ ಮುರುಗಾ ಶರಣರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗದ ಜೈಲಿನಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹತ್ತಿರದ ಆಸ್ಪತ್ರೆಗೆ ದಾಖಲಿಸಲು ಅನುಮತಿ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸ್ಥಳಾಂತರಕ್ಕೆ ಅನುಮತಿ ನೀಡಿದೆ. ಈ ಆದೇಶದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮುರುಘಾ ಶರಣರನ್ನು ಕರೆತಂದ ಜೈಲಧಿಕಾರಿಗಳು, ಶಿವಮೊಗ್ಗ ಜೈಲಿಗೆ ಕರೆದೊಯ್ದು ಕೆಲ ಕಾನೂನು ರಿವಾಜುಗಳನ್ನು ಮುಗಿಸಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದಾರೆ. ಶ್ರೀಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Related posts

ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಮನವಿ

Malenadu Mirror Desk

ಮಲೆನಾಡಿನಲ್ಲಿ ವರ್ಷಧಾರೆ, ಮೈದುಂಬಿದ ತುಂಗೆ

Malenadu Mirror Desk

ಪದವೀಧರ ಸಹಕಾರ ಸಂಘದ ಸುವರ್ಣ ಮಹೋತ್ಸವ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.