Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಗಲಾಟೆ ಮಾಡ್ಸೋದೆ ಈಶ್ವರಪ್ಪ: ಸಿದ್ದರಾಮಯ್ಯ ಆರೋಪ

ಶಿವಮೊಗ್ಗ: ಈಶ್ವರಪ್ಪ ಅವರು ಸಚಿವರಾದ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಹೆಣದ ಮೇಲೆ ರಾಜಕಾರಣ ಮಾಡಿದ್ದರು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈಶ್ವರಪ್ಪ ಅವರೇ ಗಲಾಟೆ ಮಾಡಿಸಿದ್ದಾರೆ. ೧೪೪ ಸೆಕ್ಷನ್ ನಡುವೆ ಹರ್ಷನ ಶವಯಾತ್ರೆ ಮಾಡಿದ್ದರು. ಇಂಥವರಿಂದಲೇ ಸಮಾಜದಲ್ಲಿ ಅಶಾಂತಿ ನಿರ್ಮಾಣ ಆಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
’ಪರೇಶ್ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದ್ದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದ್ರು. ಈ ಪ್ರಕರಣವನ್ನು ನಾನು ಸಿಬಿಐ ಗೆ ವಹಿಸಿದ್ದೆ. ಆಗ ಪ್ರಧಾನಿಯಾಗಿದ್ದವರು ನರೇಂದ್ರ ಮೋದಿ ಅವರು. ಗೃಹ ಸಚಿವರಾಗಿದ್ದವರು ಅಮಿತ್ ಶಾ ಅವರು. ಈಗ ಸಿಬಿಐ ವರದಿಯಲ್ಲಿ ಇದು ಆಕಸ್ಮಿಕ ಸಾವು ಎಂದು ಬಂದಿದೆ. ಅದಕ್ಕೆ ಬಿಜೆಪಿಯವರು ಸಿದ್ದರಾಮಯ್ಯನವರು ಸಾಕ್ಷ್ಯ ನಾಶ ಮಾಡಿದ್ರು ಎನ್ನುತ್ತಿದ್ದಾರೆ, ಇವರ ಯೋಗ್ಯತೆಗೆ ೨೦೦೮ ರಿಂದ ೨೦೧೩ರ ವರಗೆ ಅಥವಾ ಈಗ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಿಲ್ಲ. ಇದೇ ಬಿಜೆಪಿಯವರು ಹಿಂದೆ ಸಿಬಿಐ ಎಂದರೆ ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು, ಜೆಡಿಎಸ್ ನವರು ಚೋರ್ ಬಚಾವೋ ಇನ್ಸ್‌ಟಿಟ್ಯೂಟ್ ಎನ್ನುತ್ತಿದ್ದರು. ಈಗ ಸಿಬಿಐ ಗೆ ಏನಂತ ಕರೀಬೇಕು ನೀವೇ ಹೇಳಿ ನೋಡೋಣ ಎಂದ ಅವರು, ಬಿಜೆಪಿಯವರ ಕೆಲಸ ಅಪಪ್ರಚಾರ ಮತ್ತು ಸುಳ್ಳು ಹೇಳುವುದು’ ಎಂದು ಕಿಡಿಕಾರಿದರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ದ್ವೇಷದ ರಾಜಕಾರಣ ಜಾಸ್ತಿಯಾಗಿದೆ. ಇದರಿಂದ ಧರ್ಮ ಧರ್ಮಗಳ ನಡುವೆ ಸಂಘರ್ಷ ಉಂಟಾಗುತ್ತಿದೆ. ಧರ್ಮಗಳ ನಡುವೆ ಸಂಘರ್ಷ ಉಂಟಾಗುತ್ತಿರುವುದರಿಂದ ಜನರ ಮನಸು ಒಡೆದು ಹೋಗಿದೆ. ಇಂತಹ ಪರಿಸ್ಥಿತಿ ಕಳೆದ ೮-೧೦ ವರ್ಷಗಳಿಂದ ದೇಶದಲ್ಲಿ ನಡೆದುಕೊಂಡು ಬಂದಿದೆ ಎಂದರು.

ಸಚಿವ ಶ್ರೀರಾಮುಲು ಒಬ್ಬ ದಡ್ಡ. ಆತನಿಗೆ ಏನೂ ಗೂತ್ತಿಲ್ಲ. ಅವನಿಗೆ ಸಂವಿಧಾನ, ಮೀಸಲಾತಿ ಅಂದ್ರೆ ಏನೂ ಗೂತ್ತಿಲ್ಲ. ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ನಾಗಮೋಹನ್ ದಾಸ್ ವರದಿ ಜಾರಿ ಮಾಡುತ್ತೇವೆ ಎಂದು ರಕ್ತದಲ್ಲಿ ಬರೆದು ಕೊಡುತ್ತೇನೆ ಅಂದ್ರು, ಆದರೆ ಹಾಗೆ ಮಾಡಿದ್ರಾ ?

ಸಿದ್ದರಾಮಯ್ಯ ,ಪ್ರತಿಪಕ್ಷನಾಯಕ

Ad Widget

Related posts

ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಆದ್ಯತೆ ಮೇರೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

ಮಕ್ಕಳಲ್ಲಿ ಪರಿಸರ ಜಾಗೃತಿ ಅಗತ್ಯ

Malenadu Mirror Desk

ಕಾಗೋಡು ತಿಮ್ಮಪ್ಪರಿಗೇ ಸಿಗದ ಕೊರೊನ ಲಸಿಕೆ !

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.