Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ:  2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗಳಿಸುವುದು ಖಚಿತ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ನಗರದ ಹರ್ಷ ದಿ ಫರ್ನ್ ಹೋಟೆಲ್ ನಲ್ಲಿ ಬಿಜೆಪಿ ಶಿವಮೊಗ್ಗ ವಿಭಾಗದ ಸಭೆ(ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ) ಉದ್ಘಾಟಿಸಿ ಮಾತನಾಡಿದರು.
ಕಳೆದ ಬಾರಿ ಈ ಮೂರೂ ಜಿಲ್ಲೆಯಲ್ಲಿ ಶೃಂಗೇರಿ, ಭದ್ರಾವತಿ, ಹಳಿಯಾಳ ಕ್ಷೇತ್ರಗಳಲ್ಲಿ ಸೋತಿದ್ದೆವು. ಈ ಬಾರಿ ಆ ಮೂರೂ ಕ್ಷೇತ್ರಗಳನ್ನು ಕೂಡ ಗೆಲ್ಲಬೇಕು. ನಮ್ಮ ನಮ್ಮ ಕ್ಷೇತ್ರಗಳಲ್ಲಿ ಬಿಜೆಪಿ ಯಾವ ರೀತಿಯಲ್ಲಿ ಸಂಘಟನೆಯಾಗಿದೆ. ಏನೇನು ಅಭಿವೃದ್ಧಿಗಳು ಆಗಿವೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ಯಶಸ್ವಿಯಾಗಿ ಜನರಿಗೆ ಮನದಟ್ಟು ಮಾಡಬೇಕು ಎಂದರು.
ಭಾರತ, ಪಾಕಿಸ್ತಾನ ಎಂದು ವಿಂಗಡಿಸಿ ಹಿಂದೂಗಳ ಕಗ್ಗೊಲೆ ಮಾಡಿದವರು ಈಗ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಪಾಕಿಸ್ತಾನ ಹಸ್ಕೆ ಲೇಂಗೇ ಹಿಂದೂಸ್ತಾನ್ ಲಡ್ಕೇ ಲೇಂಗೇ ಎನ್ನುವವರಿಗೆ ಕಾಂಗ್ರೆಸ್ ಬೆಂಬಲಿಸಿತ್ತು. ಒಂದು ಕಡೆ ಸೈದ್ದಾಂತಿಕವಾಗಿ ಇನ್ನೊಂದೆಡೆ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಯಿಂದ ಜನ ಒಪ್ಪಿದ್ದಾರೆ. ಸಂವಿಧಾನ ಮುರಿಯುವ ರಾಷ್ಟ್ರದ್ರೋಹಿಗಳಿಗೆ ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದೆ. ಇವತ್ತು ಎಲ್ಲಿ ಹೋದರೂ ಬಿಜೆಪಿಯ ಸಂಘಟನೆ ಸಿದ್ಧಾಂತ ಮತ್ತು ನಾಯಕತ್ವವನ್ನು ಜನ ಸ್ವಾಗತ ಮಾಡುತ್ತಿದ್ದು, 2023ರ ವಿಧಾನಸಭೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಜಯಭೇರಿ ಬಾರಿಸಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜ್ಯದಲ್ಲೂ 150 ಸ್ಥಾನ ಗೆಲ್ಲುವುದು ಖಚಿತ ಎಂದರು.

ಪಕ್ಷದ ಸಿದ್ಧಾಂತ, ಸಂಘಟನೆ ಮತ್ತು ನಾಯಕತ್ವವನ್ನು ಜನ ಗುರುತಿಸಿ ಬಿಜೆಪಿ ಕಡೆಗೆ ಆಕರ್ಷಿತರಾಗುತ್ತಾರೆ. ಹಿಂದೆ ದೇಶದಲ್ಲಿ ರಾಷ್ಟ್ರ ಭಕ್ತಿ ಜಾಗೃತಿ ಮತ್ತು ನಮ್ಮತನ ಮರೆತ ನಾಯಕತ್ವವನ್ನು ಜನ ನೋಡಿದ್ದಾರೆ. ಮೋದಿ ಪ್ರಧಾನಿಯಾದ ನಂತರ ಸ್ವಾತಂತ್ರ್ಯ ಹೋರಾಟಗಾರರ ಕಲ್ಪನೆ ಒಂದೊಂದಾಗಿ ಈಡೇರುತ್ತಿದೆ. ಆರ್ಟಿಕಲ್ 370 ರದ್ದಾಯ್ತು. ತ್ರಿವಳಿ ತಲಾಖ್ ನಿಷೇಧ ಜಾರಿಯಾಗಿ ಮುಸ್ಲಿಂ ಸಹೋದರಿಯರಿಗೆ ನೆಮ್ಮದಿ ಸಿಕ್ಕಿದೆ ಎಂದರು.
 ಅಯೋಧ್ಯೆ, ಮಥುರಾ, ಕಾಶಿ ಭಾರತೀಯರ ಕನಸು ಈಗ ನನಸಾಗುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ಮಂದಿರ ಕಟ್ಟುತ್ತಿದ್ದಾರೆ. ಮಥುರಾ, ಕಾಶಿ ಕೂಡ ವಿಮುಕ್ತವಾಗಿ ಕೋಟ್ಯಂತರ ಭಾರತೀಯರ ಕನಸು ನನಸಾಗಲಿದೆ. ದೇಶ ಭಕ್ತಿ ಎಂಬ ಭಾವನೆ ಬಂದಾಗ ಎಲ್ಲರೂ ಒಟ್ಟಾಗಿ ಪಕ್ಷ ಬೇಧ ಮರೆತು ಬಿಜೆಪಿ ಬೆಂಬಲಿಸುತ್ತಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಆದಾಗ ಇಡೀ ವಿಶ್ವವೇ ಪ್ರಧಾನಿ ಮೋದಿ ಜೊತೆಗೆ ನಿಂತಿತ್ತು. ಈಗ ಜನ ಬಿಜೆಪಿಯವರು ರಾಷ್ಟ್ರವಾದಿಗಳು. ಕಾಂಗ್ರೆಸ್ ನವರೇ ಕೋಮುವಾದಿಗಳು ಎಂದು ತೀರ್ಮಾನಿಸಿದ್ದಾರೆ ಎಂದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಮೂರು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Ad Widget

Related posts

ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಭೀಕರ ಹತ್ಯೆ.

Malenadu Mirror Desk

ಭದ್ರಾವತಿ ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಸೆರೆ

Malenadu Mirror Desk

ಸಿಗಂದೂರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವಿಖ್ಯಾತಾನಂದ ಶ್ರೀಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.