Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ಉಪನ್ಯಾಸಕರ ಸಂಘದಿಂದ ಶೈಕ್ಷಣಿಕ ಸಮ್ಮೇಳನ
ರಾಷ್ಟ್ರೀಯ ಶಿಕ್ಷಣ ನೀತಿ, ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಚರ್ಚೆ

ಶಿವಮೊಗ್ಗ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಾರಥ್ಯದಲ್ಲಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಬೋಧಕೇತರ ಸಂಘದ ಸಹಯೋಗದೊಂದಿಗೆ ಡಿ.17 ರಂದು ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆದಿಚುಂಚನಗಿರಿ ಸಮುದಾಯಭವನದಲ್ಲಿ ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್. ಯೋಗೀಶ್, ಜಿಲ್ಲೆಯಲ್ಲಿ ಸುಮಾರು 130 ಪದವಿಪೂರ್ವ ಕಾಲೇಜುಗಳಿವೆ ಈ ಕಾಲೇಜುಗಳ ಉಪನ್ಯಾಸಕರು ಬೋಧಕೇತರ ವರ್ಗದವರು ಒಂದೆಡೆ ಸೇರಿ ಶಿಕ್ಷಣ ಕ್ಷೇತ್ರದಲ್ಲಿನ ಅದರಲ್ಲೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಮಹತ್ವಪೂರ್ಣವಾದ ಅಂಶಗಳನ್ನು ಚರ್ಚಿಸುವ ದೃಷ್ಟಿಯಿಂದ ಈ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ನೀಡಲಾಗುವುದು. ಸಾಧಕ ಉಪನ್ಯಾಸಕರನ್ನೂ ಈ ಸಮ್ಮೇಳನದಲ್ಲಿ ಗೌರವಿಸಲಾಗುವುದು ಎಂದರು.

ಪಿಯು ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ತಯಾರಾಗಬೇಕು ,ಕೊರೊನ ನಂತರದ ಸವಾಲುಗಳೇನು, ಫಲಿತಾಂಶ ಉತ್ತಮಪಡಿಸಿಕೊಳ್ಳಲು ಉಪನ್ಯಾಸಕರು ಹೇಗೆ ಸಿದ್ಧವಾಗಬೇಕೆಂಬ ಅಂಶಗಳು ಸಮ್ಮೇಳನದಲ್ಲಿ ಚರ್ಚೆಯಾಗಲಿವೆ. ಜೊತೆಗೆ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಉಪನ್ಯಾಸಕರ ಹಾಗೂ ಸಿಬ್ಬಂದಿಗಳ ಕೆಲವು ಸಮಸ್ಯೆಗಳನ್ನು ಚರ್ಚಿಸಿ ಜನಪ್ರತಿನಿಧಿಗಳ ಮೂಲಕ ಸರ್ಕಾರದ ಗಮನಸೆಳೆಯಲಾಗುವುದು ಎಂದು ಯೋಗಿಶ್ ಹೇಳಿದರು.

ಸಮ್ಮೇಳನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಡಯೆಟ್‌ನ ಹಿರಿಯ ಉಪನ್ಯಾಸಕ ಜಿ.ವಿ. ಹರಿಪ್ರಸಾದ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವಿಧ ಸಂಘಗಳ ಪ್ರಮುಖರು ಮತ್ತು ಪ್ರಾಚಾರ್ಯರಾದ ಪ್ರವೀಣ್ ಮಹಿಷಿ, ಎ.ಹೆಚ್. ನಿಂಗೇಗೌಡ, ತಿಮ್ಮಯ್ಯ ಪುರಲೆ, ಎಸ್.ವಿ. ಗುರುರಾಜ್, ಹೆಚ್.ಎಂ. ಶಶಿಕುಮಾರ್, ಬಿ. ರಂಗಪ್ಪ, ವೈ.ಎಸ್. ನಾಯಕ್ ಮುಂತಾದವರು ಭಾಗವಹಿಸುತ್ತಾರೆ. ಅಧ್ಯಕ್ಷತೆಯನ್ನು ರಾಜ್ಯ ಪ್ರಾಚಾರ್ಯರ ಸಂಘದ ಚಂದ್ರಪ್ಪ ಎಸ್ ಗುಂಡಪಲ್ಲಿ ವಹಿಸುವರು ಎಂದರು.

ಮಧ್ಯಾಹ್ನ 2 ಗಂಟೆಗೆ ಇಲಾಖಾ ನಿಯಮಗಳ ಕುರಿತು ಸಂವಾದ ಕಾರ್ಯಕ್ರಮ ಇರುತ್ತದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೃಷ್ಣಪ್ಪ ವಹಿಸುವರು. ಸಂವಾದಕರಾಗಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎ.ಹೆಚ್. ನಿಂಗೇಗೌಡ, ಭಾಗವಹಿಸುವರು. ಸಂವಾದದಲ್ಲಿ ವಿವಿಧ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರ ಸಂಘಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದರು.

ಉದ್ಘಾಟನಾ ಕಾರ್ಯಕ್ರಮ:

ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಗೃಹ ಸಚಿವ ಆರಗ ಜ್ಞಾನೇಂದ್ರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ ಶಾಸಕರುಗಳಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಬಿ.ಕೆ. ಸಂಗಮೇಶ್, ಕೆ.ಬಿ. ಅಶೋಕ ನಾಯ್ಕ್, ಆಯನುರು ಮಂಜುನಾಥ್, ಎಸ್. ರುದ್ರೇಗೌಡ, ಭಾರತೀಶೆಟ್ಟಿ. ಡಿ.ಎಸ್. ಅರುಣ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಂಎಡಿಬಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮೇಯರ್ ಶಿವಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ. ಜೊತೆಗೆ ಜಿಲ್ಲಾಧಿಕಾರಿ ಡಾ ಆರ್.ಸೆಲ್ವಮಣಿ, ಜಿಪಂ ಸಿಇಒ ಎನ್.ಡಿ. ಪ್ರಕಾಶ್, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹಾಗೂ ವಿವಿಧ ಕಾಲೇಜುಗಳ ಉಪನ್ಯಾಸಕರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಪ್ಪ ಎಸ್. ಗುಂಡಪಲ್ಲಿ, ನಾಗರಾಜ್ ಕೆ.ಎಂ, ಪಂಡರಿನಾಥ್, ಶಶಿಕುಮಾರ್, ದಿನಕರ್, ಡಾ.ಸಾಸ್ವೆಹಳ್ಳಿ ಸತೀಶ್ ಮುಂತಾದವರಿದ್ದರು.

ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಉಪನ್ಯಾಸಕರ ಹಾಗೂ ಸಿಬ್ಬಂದಿಗಳ ಕೆಲವು ಸಮಸ್ಯೆಗಳನ್ನು ಚರ್ಚಿಸಿ ಜನಪ್ರತಿನಿಧಿಗಳ ಮೂಲಕ ಸರ್ಕಾರದ ಗಮನಸೆಳೆಯಲಾಗುವುದು

ಎಸ್.ಯೋಗಿಶ್ , ಉಪನ್ಯಾಸಕರ ಸಂಘದ ಅಧ್ಯಕ್ಷ

Ad Widget

Related posts

ಹಿಂದುಳಿದವರಿಗೆ ರಾಜಕೀಯ ಸ್ಥಾನಮಾನ ಕೊಟ್ಟಿದ್ದೆ ಕಾಂಗ್ರೆಸ್

Malenadu Mirror Desk

ಕರ್ಫ್ಯೂ ತೆರವು ಮಾಡಿ ವ್ಯಾಪಾರಕ್ಕೆ ಅವಕಾಶ ನೀಡಿ: ಶಿವಮೊಗ್ಗ ವರ್ತಕರ ಮನವಿ

Malenadu Mirror Desk

ಚಿತ್ರ ಬಿಡಿಸಿಕೊಡುವೆನೆಂದು ಚಿತ್ರಪಟವನ್ನೇ ಸೇರಿಬಿಟ್ಟೆಯಾ ಗೆಳೆಯ…

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.