Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಎಜುಕೇಷನ್ ಹಬ್ ಆಗಿದೆ: ಸಂಸದ ರಾಘವೇಂದ್ರ

ಶಿವಮೊಗ್ಗನಗರವು ರಾಜ್ಯದಲ್ಲೇ ಒಂದು ಶಿಕ್ಷಣದ ಹಬ್‌ಆಗಿ ಪರಿವರ್ತನೆಯಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದ ಡಿವಿಎಸ್ ಕಾಲೇಜಿನ ಆವರಣದಲ್ಲಿ ದೇಶೀಯ ವಿದ್ಯಾ ಶಾಲಾ ಸಮಿತಿ, ಡಿವಿಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜು ಶಿವಮೊಗ್ಗ ಇದರ ಸುವರ್ಣ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟಿಸಿ ಅವರು ಮಾತನಾಡಿದರು.
ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜು, ಕೃಷಿ ಕಾಲೇಜು, ಆಯುರ್ವೇದ ಕಾಲೇಜು, ಪಶು ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಈ ರೀತಿ ಅನೇಕ ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಶಿವಮೊಗ್ಗದ ವಿದ್ಯಾರ್ಥಿಗಳಿಗೆ ವಿಪುಲವಾದ ಅವಕಾಶವಿದೆ ಎಂದರು.
ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವುದು ಕರ್ತವ್ಯ. ಪಠ್ಯ-ಪುಸ್ತಕಗಳಿಗೆ ಸೀಮಿತರಾಗದೆ ತಮ್ಮಲ್ಲಿರುವ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು ಎಂದ ಅವರು, ಇಡೀ ರಾಜ್ಯದಲ್ಲಿ ಡಿವಿಎಸ್ ಒಂದು ವಿಶಿಷ್ಟ ಸಂಸ್ಥೆಯಾಗಿದೆ. ಅತ್ಯಂತ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ನೀಡುತ್ತಿರುವ ಶಿಕ್ಷಣ ಸಂಸ್ಥೆಯಾಗಿದೆ ಎಂದರು.
ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಆಡಳಿತ ಮಂಡಳಿ ಕಾಲಕಾಲಕ್ಕೆ ಒದಗಿಸುತ್ತಾ ಬಂದಿದೆ. ತಮ್ಮ ಮುಂದಿನ ಭವಿಷ್ಯಕ್ಕೆ ವಿದ್ಯಾರ್ಥಿಗಳಿಗೆ ಯಾವ ರೀತಿಯ ಶಿಕ್ಷಣಬೇಕು ಮತ್ತು ಏನು ಅನುಕೂಲಬೇಕು ಎಲ್ಲವನ್ನು ಈ ಸಂಸ್ಥೆ ಒದಗಿಸಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಕೆ.ಎನ್.ರುದ್ರಪ್ಪ ಕೊಳಲೆ ವಹಿಸಿದ್ದರು. ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜ್‌ಶೇಖರ್, ಸಹಕಾರ್ಯದರ್ಶಿ ಡಾ.ಎ.ಸತೀಶ್‌ಕುಮಾರ್ ಶೆಟ್ಟಿ, ಖಜಾಂಚಿ ಕೆ.ಗೋಪಿನಾಥ್, ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Ad Widget

Related posts

ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

ಸಂಸದರಿಂದ ಗಣಪತಿ ಉತ್ಸವ ದುರ್ಬಳಕೆ: ಕಾಂಗ್ರೆಸ್ ಆರೋಪ

Malenadu Mirror Desk

‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.