ಶಿವಮೊಗ್ಗ,ಫೆ.೨೫: ಕೋಲ್ಕತ್ತದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಓರಿಯಂಟಲ್ ಸಂಸ್ಥೆಯು ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರಿಗೆ ಸ್ವಾಮಿ ವಿವೇಕಾನಂದ ಎಕ್ಸಲೆನ್ಸಿ ಅವಾರ್ಡ್ ನೀಡಿ ಗೌರವಿಸಿದೆ.
ಕೋಲ್ಕತ್ತಾದ ರಬೀಂದ್ರ ಭವನ ಆಡಿಟೋರಿಂನಲ್ಲಿ ನಡೆದ ೪೪ ನೇ ಅಂತಾರಾಷ್ಟ್ರೀಯ ಪಾರಂಪರಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು. ರಾಮಪ್ಪ ಅವರು ಧಾರ್ಮಿಕ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.