ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ.ಬಿ.ಪ್ರಸನ್ನಕುಮಾರ್ ಅವರು ಶುಕ್ರವಾರ ಜಾತ್ಯಾತೀತ ಜನತಾದಳ ಸೇರಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿ ಪಕ್ಷದ ವರಿಷ್ಠ ದೇವೇಗೌಡರ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರು
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಅವರು ಅದು ಸಿಗದೇ ಇದ್ದಾಗ ಮುನಿಸಿಕೊಂಡಿದ್ದರು. ಪಕ್ಷ ಸೇರುವ ಸಂದರ್ಭ ಜೆಡಿಎಸ್ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ಇದ್ದರು. ಪ್ರಸನ್ನಕುಮಾರ್ ಅವರ ಜತೆಯಲ್ಲಿ ಮಹಾನಗರಪಾಲಿಕೆ ಸದಸ್ಯ ಬೊಮ್ಮನಕಟ್ಟೆ ಮಂಜುನಾಥ್, ಪ್ರಮುಖರಾದ ರಘು ಮತ್ತಿತರರು ಇದ್ದರು.