Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.11ರಿಂದ ವಿಮಾನ ಹಾರಾಟ, ಸಚಿವ ಎಂ.ಬಿ.ಪಾಟೀಲ್ ಹೇಳಿಕೆ, ರಾಜ್ಯ ಸರ್ಕಾರದಿಂದ ಕಾರ್ಯಾಚರಣೆ ಮತ್ತು ನಿರ್ವಹಣೆಗೊಳ್ಳಲಿರುವ ಮೊದಲ ಏರ್ ಪೋರ್ಟ್

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ20 ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ.
ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು ಎಂದು ವಿವರಿಸಿದರು.
ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್‌ಐಐಡಿಸಿ) ವಹಿಸಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ ಎಂದು ಪಾಟೀಲ ಹೇಳಿದರು.
ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ 20ವಿಮಾನಗಳು ಬಂದಿಳಿದಿವೆ. ಇದರಿಂದಾಗಿ12 ಲಕ್ಷ ರೂ. ಆದಾಯ ಬಂದಿದೆ ಎಂದರು.
ಆ.11 ರಂದು ನಿಲ್ದಾಣ ಕಾರ್ಯಾರಂಭಗೊಳ್ಳಲಿದ್ದು, ಅಂದು ಮೊದಲ ವಿಮಾನ ಹಾರಾಟ ನಡೆಸಲಿದೆ. ಈ ಐತಿಹಾಸಿಕ ಸನ್ನಿವೇಶಕ್ಕೆ ಸಾಕ್ಷಿಯಾಗಲು ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಯೋಜನೆಯಂತೆ ನಡೆದರೆ ಆ.11 ರಂದು ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗ ನಿಲ್ದಾಣದಲ್ಲಿ ಇಳಿಯಲಿದೆ ಎಂದರು.

Ad Widget

Related posts

ಆಗಸ್ಟ್‌ನಲ್ಲಿ ರೈಲ್ವೆ ಮೇಲ್ಸೇತುವೆ, ತುಂಗಾ ಸೇತುವೆ ಲೋಕಾರ್ಪಣೆ: ಸಂಸದ ರಾಘವೇಂದ್ರ ಭರವಸೆ

Malenadu Mirror Desk

ಐಲೆಟ್ಸ್ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Malenadu Mirror Desk

ಪುನೀತ ದರ್ಶನಕ್ಕೆ ಜನಸಾಗರ, ಮಲೆನಾಡಿನೊಂದಿಗೆ ಮಧುರ ಬಾಂಧವ್ಯ ಹೊಂದಿದ್ದ ಅಪ್ಪು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.