ಶಿವಮೊಗ್ಗ,ಜು.೨೦: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ ಗೌರವ ಡಾಕ್ಟರೇಟ್ ನೀಡಲು ಅನುಮತಿ ಲಭಿಸಿದೆ.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಿದೆ.
ವಿಶ್ವವಿದ್ಯಾಲಯದ ೮ ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ವಿವಿಯ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಜು. ೨೧ ರಂದು ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ, ಮಾಜಿ ಸಿಎಂಗೆ ಗೌರವ ಡಾಕ್ಟರೇಟ್ ನೀಡಿ ಅಭಿನಂದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ReplyForward |