Malenadu Mitra
ರಾಜ್ಯ ಶಿವಮೊಗ್ಗ

ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್

ಶಿವಮೊಗ್ಗ: ಕುವೆಂಪು ವಿಶ್ವ ವಿದ್ಯಾಲಯದ ೩೩ನೇ ಘಟಿಕೋತ್ಸವ ಶನಿವಾರ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ ವೀರಭದ್ರಪ್ಪ ಅವರು,ಸಿಂಡಿಕೇಟ್ ಸಭೆಯ ಮೂಲಕ ೫೮ ಜನರ ಸಾಧಕರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು. ಅಂತಿಮವಾಗಿ ರಾಜ್ಯಪಾಲರು ಈ ಮೂರು ಜನರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದರು.
ಸದಾನಂದ ಶೆಟ್ಟಿ (ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರ):

ಮೂಲತಃ ಉಡುಪಿ ಮೂಲದ ಸದಾನಂದಶೆಟ್ಟಿ, ಶಿಕ್ಷಣ ತಜ್ಞರು ಮತ್ತು ಕ್ರೀಡಾ ಆಡಳಿತಗಾರರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರು ವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಶ್ರಿದೇವಿ ಶಿಕ್ಷಣ ಟ್ರಸ್ಟ್ ಸ್ಥಾಪಕರು. ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.

ಪಂಡಿತ್ ರಾಜಗುರು ಗುರುಸ್ವಾಮಿ ಕಲಿಕೇರಿ(ಸಾಹಿತ್ಯ ಮತ್ತು ಸಂಗೀತ ಕ್ಷೇತ್ರ):

ಮೂಲತಃ ಬಿಜಾಪುರ ಜಿಲ್ಲೆಯ ಕಲಿಕೇರಿ ಗ್ರಾಮದವರು. ಗಾನಭಾರತಿ, ಭಾವ ಭಗವದ್ಗೀತೆ ಮತ್ತಿತರ ಕವನ ಸಂಕಲನಗಳು, ಚಿನ್ಮಯ, ಮೌನ ತಪಸ್ವಿ ಕಾದಂಬರಿ, ೨೧ಷಟ್ಪದಿ ಕಾವ್ಯಗಳನ್ನು ಪ್ರಕಟಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಇವರು ಸುಮಾರು ಆರು ಸಾವಿರಕ್ಕೂಅಧಿಕ ಗೀತಗಾಯನ ಕಛೇರಿ ನಡೆಸಿಕೊಟ್ಟಿದ್ದಾರೆ. ಇವರ ಸಾಹಿತ್ಯ, ಮತ್ತು ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.

ಎಂ. ಚಂದ್ರಪ್ಪ(ಗ್ರಾಮೀಣಾಭಿವೃದ್ಧಿ ಕ್ಷೇತ್ರ):

ಮೂಲತಃ ದಾವಣಗೆರೆ ಜಿಲ್ಲೆಯ ಇವರು, ರಾಜಕಾರಣಿ ಮತ್ತು ಹಲವು ಶಿಕ್ಷಣ ಸಂಸ್ಥೆಗಳ ಸ್ಥಾಪಕರು. ಚಿತ್ರದುರ್ಗ ಜಿಲ್ಲೆಯ ದೇವರಾಜ್ ಅರಸ್ ಶಿಕ್ಷಣ ಸಮೂಹದ ಸ್ಥಾಪಕರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಾಸಕಾಂಗ ಸಮಿತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿರುತ್ತಾರೆ. ಇವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕೆಲಸಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.

Ad Widget

Related posts

ಸಹನಾ ಕ್ರಿಕೆಟರ್ಸ್‍ನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯ : ಬೆಂಗಳೂರು ಪ್ರಥಮ, ತೀರ್ಥಹಳ್ಳಿ ದ್ವಿತೀಯ,ಕ್ರಮವಾಗಿ 1,50,000 ಹಾಗೂ 75000 ರೂ. ಗೆದ್ದ ತಂಡಗಳು

Malenadu Mirror Desk

ಭದ್ರಾ ಜಲಾಶಯದ ಗರ್ಭದಲ್ಲಿಯೇ ಕಳಪೆ ಕಾಮಗಾರಿ ರೈತ ಮುಖಂಡ ಕೆ.ಟಿ. ಗಂಗಾಧರ್ ತನಿಖೆಗೆ ಆಗ್ರಹ

Malenadu Mirror Desk

ವಾಜಪೇಯಿ ಬಡಾವಣೆ ಫಲಾನುಭವಿಗಳಿಗೆ ನಿವೇಶನ ಖಾತಾ ಪತ್ರ ಹಂಚಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.