ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿ ಸಹಪ್ರಾಧ್ಯಾಪಕ ಡಾ.ಟಿ.ಡಿ.ತಿಮ್ಮಪ್ಪ ಅವರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಅಧಿಕ ಪ್ರಭಾರದಲ್ಲಿಸಿ ಆದೇಶಿಸಲಾಗಿದೆ.
ಡಾ.ಟಿ.ಡಿ.ತಿಮ್ಮಪ್ಪ ಅವರು, ಇಎನ್ ಟಿ ವಿಭಾಗದಲ್ಲಿ ಸಹ ಪ್ರಾಧ್ಯಾಪಕಕರಾಗಿ ಕೆಲಸ ಮಾಡುತಿದ್ದು, ಈಗ ಮೆಗ್ಗಾನ್ ಅಧೀಕ್ಷಕರಾಗಿ ನೇಮಕವಾಗಿದ್ದಾರೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ಡಾ.ಎಸ್.ಶ್ರೀಧರ್ ಅವರ ನೇಮಕ ಆದೇಶವನ್ನು ರದ್ದುಗೊಳಿಸಲಾಗಿದೆ. ಬಿಜೆಪಿ ಸರಕಾರ ಇರುವಾಗ ಶ್ರೀಧರ್ ಅವರನ್ನು ಅಧೀಕ್ಷಕರಾಗಿ ನೇಮಕ ಮಾಡಲಾಗಿತ್ತು. ಅದೇ ಹುದ್ದೆಯಲ್ಲಿ ಮುಂದುವರಿಯುವ ಪ್ರಯತ್ನವನ್ನು ಅವರು ಮಾಡಿದ್ದರಾದರೂ ಕಾಂಗ್ರೆಸ್ ಸರಕಾರ ಅವಕಾಶ ನೀಡಲಿಲ್ಲ. ಮೂಲತಃ ಬಳ್ಳಾರಿ ಜಿಲ್ಲೆಯವರಾದ ತಿಮ್ಮಪ್ಪ ಅವರು ವೈದ್ಯಕೀಯ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿದ್ದು, ಈಗ ನೂತನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.