Malenadu Mitra
ರಾಜ್ಯ ಶಿವಮೊಗ್ಗ ಸಾಗರ

ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ

ಶಿವಮೊಗ್ಗ,ಅ.೨: ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿದ್ದ ಕಲ್ಲುತೂರಾಟದಿಂದ ಪ್ರಕ್ಷುಬ್ಧವಾಗಿದ್ದ ಶಿವಮೊಗ್ಗ ನಗರದ ಹೊರವಲಯದ ರಾಗಿಗುಡ್ಡದಲ್ಲಿ ಪರಿಸ್ಥಿತಿ ತಹಬದಿಗೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಭಾನುವಾರ ನಡೆದ ಘಟನೆಗೆ ಸಂಬಂಧಪಟ್ಟಂತೆ ೪೩ ಜನರನ್ನು ಮಂದಿಯನ್ನು ಬಂಧಿಸಲಾಗಿದೆ. ಗಲಭೆ ಪೀಡಿತ ಪ್ರದೇಶವಾದ ರಾಗಿಗುಡ್ಡದಲ್ಲಿ ಆರ್‌ಎಎಫ್, ಕೆಎಸ್‌ಆರ್‌ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ರಾಗಿಗುಡ್ಡ ಪ್ರದೇಶವನ್ನೊಳಗೊಂಡ ಶಾಂತಿನಗರಕ್ಕೆ ಸಂಚರಿಸುವ ಪ್ರತಿ ವಾಹನವನ್ನು ಪರಿಶೀಲನೆ ನಡೆಸಲಾಗುತ್ತಿದೆ. ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮತ್ತು ಹೊರಗಿನವರು ಎಂದು ಭಾವಿಸಲಾದವರನ್ನು ವಿಚಾರಣೆ ನಡೆಸಲಾಗುತ್ತಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ:
ರಾಗಿಗುಡ್ಡಕ್ಕೆ ಸೀಮಿತವಾಗಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವಿಸ್ತರಣೆ ಮಾಡಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸಿಆರ್‌ಪಿಸಿ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.
ಶಿವಮೊಗ್ಗ ನಗರದ ಇತರೆ ಪ್ರದೇಶದಲ್ಲಿಯು ಕಿಡಿಗೇಡಿಗಳು ಗಲಭೆ ಉಂಟು ಮಾಡುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿತ್ತು. ಈ ಹಿನ್ನೆಲೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾತ್ರಿ ೧ ಗಂಟೆಯಿಂದಲೆ ನಿಷೇಧಾಜ್ಞೆ ಜಾರಿಯಲ್ಲಿದೆ.

ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. ಘೋಷಣೆಗಳನ್ನು ಕೂಗುವುದು, ಪ್ರಚೋದನಕಾರಿ ಹೇಳಿಕೆ ನೀಡುವುದು, ಪ್ರಚೋದನಕಾರಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ ಕಟ್ಟುವುದನ್ನು ನಿಷೇಧಿಸಲಾಗಿದೆ. ಮಾರಕಾಸ್ತ್ರ, ಸ್ಪೋಟಕ ಹೊಂದುವುದು, ಅವುಗಳನ್ನು ಹಿಡಿದು ಓಡಾಡುವುದನ್ನು ಕೂಡ ನಿಷೇಧಿಸಲಾಗಿದೆ.ಈ ಹಿಂದೆ ಅನುಮತಿ ಪಡೆದಿರುವ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ಅನುಮತಿ ಇದೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಅಂಗಡಿಗಳು ಬಂದ್:
ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಲೇ ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿ ಬಜಾರ್‌ನಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಗಾಂಧಿ ಬಜಾರ್‌ನಲ್ಲಿ ಎಂದಿನಂತೆ ಬೆಳಗ್ಗೆಯಿಂದ ವ್ಯಾಪಾರ, ವಹಿವಾಟು ಆರಂಭವಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ದುರ್ಗಿಗುಡಿ, ಕುವೆಂಪು ರಸ್ತೆ, ಜೈಲ್ ರಸ್ತೆ ಸೇರಿದಂತೆ ಉಳಿದೆಡೆ ವ್ಯಾಪಾರ ವಹಿವಾಟು ಸಹಜ ಸ್ಥಿತಿಯಲ್ಲಿದೆ.
ಅನಾಮಿಕ ಓಮಿನಿ ವಾಹನದಲ್ಲಿ ಬಂದಿದ್ದರೆ ಕಿಡಿಗೇಡಿಗಳು:
ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದು ಮೊದಲೇ ಪ್ಲ್ಯಾನ್ ಮಾಡಿ ಗಲಭೆ ಮಾಡಿದ್ದಾರೆಯೇ ಎಂಬ ಪ್ರಶ್ನೆ ಏಳುವಂತೆ ಮಾಡಿದೆ. ಕಲ್ಲು ತೂರಾಟವಾದ ರಾಗಿಗುಡ್ಡ ಶನೇಶ್ವರ ದೇವಾಲಯದ ಬಳಿ ಓಮಿನಿ ಕಾರು ನಿಲ್ಲಿಸಿದ ಕಿಡಿಗೇಡಿಗಳ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮುಖಕ್ಕೆ ಹಸಿರು ಬಣ್ಣದ ಬಟ್ಟೆ ಕಟ್ಟಿಕೊಂಡು ಯುವಕರು ಬಂದಿದ್ದರು. ಕೆಎ – ೨೦ ಪಾಸಿಂಗ್ ಇರುವ ಎರಡು ಓಮಿನಿ ಗಾಡಿಯಲ್ಲಿ ಬಂದಿದ್ದ ೧೫ ಮಂದಿ ವಾಹನದಿಂದ ಇಳಿಯುವ ದೃಶ್ಯ ಸೆರೆಯಾಗಿದೆ.
ಇಡೀ ನಗರಕ್ಕೆ ನಿಷೇಧಾಜ್ಞೆ ಬೇಡ: ಗೋಪಿನಾಥ್

ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ. ಇದರಿಂದ ನಗರದ ವಾಣಿಜ್ಯ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು.
ಸುದ್ದಿಗೋ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು ಬಂದ್ ಮಾಡಿಸಲಾಗಿದೆ. ಇದರಿಂದ ವಾಣಿಜ್ಯೋದ್ಯಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ ಘಟನೆ ಸಂಭವಿಸಿದೆ. ಆದರೆಮಕ್ಕೆ ತೊಂದರೆ ಉಂಟಾಗಿದೆ. ಈಗಾಗಲೆ ಕಳೆದ ವಾರ ಮೂರ್ನಾಲ್ಕು ದಿನ ವಿವಿಧ ಕಾರಣಕ್ಕೆ ಉದ್ಯಮಗಳಲ್ಲಿ ಸ್ಥಗಿತಗೊಳಿಸಿದ್ದೆವು. ಈಗ ಪುನಃ ವ್ಯವಹಾರ ಸ್ಥಗಿತ ಮಾಡಿದರೆ ಸಮಸ್ಯೆಯಾಗಲಿದೆ ಎಂದರು.
ಗಾಂಧಿ ಬಜಾರ್ ವರ್ತಕರ ಸಂಘದ ಅಧ್ಯಕ್ಷ ವಿಜಯಕುಮಾರ್ ದಿನಕರ್ ಮಾತನಾಡಿ, ಜಿಲ್ಲಾಧಿಕಾರಿ, ಜಿಲ್ಲಾರಕ್ಷಣಾಧಿಕಾರಿಯನ್ನು ಭೇಟಿಯಾಗಿದ್ದೇವೆ. ಮಾಧ್ಯಮಗಳಲ್ಲಿ ವರದಿ ಆಧರಿಸಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳು ಧಗಧಗ ಎಂದು ವರದಿ ಮಾಡುವುದು ನಿಲ್ಲಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾ ಗೋಷ್ಟಿಯಲ್ಲಿ ಜಿಲ್ಲಾ ವಾಣಿಜ್ಯ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಪ್ರಮುಖರಾದ ಬಿ. ಗೋಪಿನಾಥ್, ವಿಜಯಕುಮಾರ್, ಶ್ರೀನಿಧಿ ಟೆಕ್ಸ್‌ಟೈಲ್ಸ್‌ನ ಟಿ.ಆರ್. ವೆಂಕಟೇಶಮೂರ್ತಿ, ಚಿನ್ನ ಬೆಳ್ಳಿ- ಗಿರವಿ ವರ್ತಕರ ಸಂಘದ ಅಧ್ಯಕ್ಷ ವಿ.ಕೆ.ಜೈನ್ ಮೊದಲಾವರಿದ್ದರು.

ಕಾಂಗ್ರೆಸ್ ಸರಕಾರದ ಪಕ್ಷಪಾತ ನಿಲುವು: ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ರ ಗುಲಾಮರ ರೀತಿಯಾಗಿದೆ. ತಲ್ವಾರ್ ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಹಿಂದೂ ಸಮಾಜದ ಕಾರ್ಯಕ್ರಮವಾಗುತ್ತದೆ. ಮುಸಲ್ಮಾನರ ಕಾರ್ಯಕ್ರಮ ಕೂಡವಾಗುತ್ತಿದೆ. ಮೊನ್ನೆ ಅನಂತನ ಚತುರ್ದಶಿ ದಿನ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮಾಡಲಾಯ್ತು. ಮಕ್ಕಳು, ಮಹಿಳೆಯರು ಎಲ್ಲರೂ ಸೇರಿ ಎರಡು ಲಕ್ಷಕ್ಕೂ ಅಧಿಕ ಜನ ಸೇರಿ ಹಬ್ಬ ಮಾಡಿದರು. ಯಾವುದೇ ಗಲಾಟೆಯಾಗಲಿಲ್ಲ. ಲಕ್ಷಾಂತರ ಜನ ಸೇರಿ ಹಲವು ಕಾರ್ಯಕ್ರಮ ಮಾಡಿದರೂ ಗಲಾಟೆಯಾಗಲ್ಲ. ಆದರೆ, ಮುಸಲ್ಮಾನರ ಮೆರವಣಿಗೆಯಲ್ಲಿ ಗಲಭೆಯಾಗಿದೆ, ರಾಜ್ಯ ಸರ್ಕಾರ ತಲೆ ತಗ್ಗಿಸಬೇಕು ಎಂದರು.
ಮೆರವಣಿಗೆ ಹೋಗುವ ಸಂದರ್ಭದಲ್ಲಿ ಕೈಯಲ್ಲಿ ತಲ್ವಾರ್ ಹಿಡಿದುಕೊಂಡು ಹೋಗುತ್ತಾರೆ. ಯಾರಿಗೆ ಎಚ್ಚರ ಅದು. ಹಿಂದೂ ಸಮಾಜಕ್ಕಾ. ಶಿವಮೊಗ್ಗ ನಗರದಲ್ಲಿ ದೊಡ್ಡ ದೊಡ್ಡ ತಲ್ವಾರ್ ನೇತು ಹಾಕಿದ್ದಾರೆ. ಕೋಲಾರದಲ್ಲೂ ಹಾಕಿದ್ದರು ಆದರೆ ಅಲ್ಲಿನ ಸಂಸದರ ಎಚ್ಚರಿಕೆ ಬಳಿಕ ತೆಗೆದರು. ಅದು ಗೊತ್ತಿದ್ದರೂ ಇಲ್ಲಿ ದೊಡ್ಡ ಖಡ್ಗ ಹಾಕಲು ಯಾಕೆ ಬಿಟ್ಟರು. ಪೊಲೀಸನವರು ಸರ್ಕಾರಕ್ಕೆ ಹೆದರಿ ಹೋಗಿದ್ದಾರೆ. ತಲ್ವಾರ್ ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ. ಇದು ಸಿಎಂ, ಗೃಹ ಮಂತ್ರಿ ಹಾಗೂ ಮುಸ್ಲಿಂರಿಗೆ ಎಚ್ಚರಿಕೆ. ತಲ್ವಾರ್ ಹಿಡಿದು ಟ್ರಾಕ್ಟರಿನಲ್ಲಿ ಹೋದರೂ ಅರೆಸ್ಟ್ ಮಾಡದ ಇವರು ಪೊಲೀಸ್ ಆಗಲು ಅನ್ ಫಿಟ್. ಕಾಂಗ್ರೆಸ್ ಸರ್ಕಾರ ಮುಸ್ಲಿಂ ರ ಗುಲಾಮರ ರೀತಿಯಾಗಿದೆ ಎಂದು ಗುಡುಗಿದರು.

Ad Widget

Related posts

ಗಾಜನೂರು ಡ್ಯಾಮಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

Malenadu Mirror Desk

ಮೆಗ್ಗಾನ್ ವೈದ್ಯಕೀಯ ವ್ಯವಸ್ಥೆ ಸುಧಾರಣೆಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಸದಾಶಿವ ಆಯೋಗದ ವರದಿ ಜಾರಿಗೊಳಿಸಬಾರದು: ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.