ಶಿವಮೊಗ್ಗ,: ಸಾಗರ ತಾಲೂಕು ಸಿಗಂದೂರು ಚೌಡಮ್ಮದೇವಿ ದೇವಾಲಯದಲ್ಲಿ ಅ.15 ರಿಂದ 24 ರವರೆಗೆ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಧರ್ಮದರ್ಶಿ ಎಸ್.ರಾಮಪ್ಪ ಅವರ ನೇತೃತ್ವದಲ್ಲಿ ನವರಾತ್ರಿ ಉತ್ಸವ ನಡೆಯಲಿದ್ದು, ಆದಾಯ ತೆರಿಗೆ ನ್ಯಾಯ ಮಂಡಳಿ ಸದಸ್ಯ ಜಿ.ಮಂಜುನಾಥ್ ಉತ್ಸವಕ್ಕೆ ಚಾಲನೆ ನೀಡವರು.ಪ್ರತಿದಿನ ಸಂಜೆ 6.30 ರಿಂದ ದೀಪೋತ್ಸವ ನೆರವೇರಲಿದೆ.
ಅ.16 ರಂದು ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಅಭಿಷೇಕ, ಹೋಮ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅ.24 ರಂದು ಸಾರಗನಜಡ್ಡು ಕಾರ್ತಿಕೇಯ ಕ್ಷೇತ್ರದ ಯೋಗೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ನಡೆಯಲಿವೆ. ನವರಾತ್ರಿ ಉತ್ಸವದ ಎಲ್ಲಾ ದಿನಗಳಲ್ಲಿಯೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.