ಶಿವಮೊಗ್ಗಅ.೧೨: ರಾಜ್ಯಾದ್ಯಂತ ಈಗಾಗಲೇ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ವಿದ್ಯುತ್ ಶಾಕ್ ಎಲ್ಲರಿಗೂ ಆಗಿದೆ. ಸರಕಾರ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿಯಮಿತ ವಿದ್ಯುತ್ ಶಾಕ್‌ನಿಂದ ಜನರಿಗೆ ತೊಂದರೆ ಆಗ್ತಿದೆ. ರೈತರ ಪಂಪಸೆಟ್‌ಗೆ ನೀರು ಸಿಗ್ತಿಲ್ಲ. ಅಲ್ಪ ಸ್ವಲ್ಪ ಬೆಳೆ ಮಾಡಲೂ ಆಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಕೂಡಲೇ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿಯಲ್ಲಿ ಅಧಿವೇಶನ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಯಬೇಕೆಂದು ದೊಡ್ಡ ಸೌಧ ಕಟ್ಟಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ವರ್ಷಕ್ಕೊಮ್ಮೆ ಮಾಡಬೇಕು. ತೀರ್ಮಾನ ಕೈಗೊಳ್ಳುವುದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು ಎಂದ ಅವರು, ನಾನು ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಬೇಕಿತ್ತು. ಹಬ್ಬ ಮುಗಿದ ನಂತರ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಕಾವೇರಿ ತೀರ್ಪು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾವೇರಿ ವಿಷಯದಲ್ಲಿ ಹಿನ್ನಡೆ ಆಗ್ತಿದೆ. ತೀರ್ಮಾನ ನಮಗೆ ಸಮಾಧಾನ ಇಲ್ಲ. ಸುಪ್ರಿಂ ಕೋರ್ಟ್ ಗೆ ಮೇಲ್ಮನವಿ ಮಾಡಿ ನ್ಯಾಯ ದೊರಕಿಸಿ ಕೊಡಬೇಕು. ಸರ್ಕಾರ ಆ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.