ಸಾಗರ ತಾಲ್ಲೂಕಿನ ಪ್ರಸಿದ್ಧ ಶಕ್ತಿ ದೇವತೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಎರಡನೇ ದಿನದ ನವರಾತ್ರಿ ಉತ್ಸವ ಸಡಗರ ಸಂಭ್ರಮದಿಂದ ನೆರವೇರಿತು. ಶಿವಮೊಗ್ಗ ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾ ಸ್ವಾಮಿಗಳು ಭಾಗವಹಿಸಿ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಧರ್ಮ ಸಂದೇಶ ನೀಡಿದರು.
ನವರಾತ್ರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವಿಗೆ ಪ್ರಾತಃ ಕಾಲ ೦೪ ಗಂಟೆಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಿತು. ಬೆಳಿಗ್ಗೆಯಿಂದಲೇ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ನೇರವೇರಿತು. ಪ್ರಾತಃ ಕಾಲ ಪೂಜೆಯಲ್ಲಿ ಆನುವಂಶಿಕ ಧರ್ಮದರ್ಶಿ ಎಸ್ ರಾಮಪ್ಪ ದೇವಸ್ಥಾನದಲ್ಲಿನ ಧಾರ್ಮಿಕ, ಸಾಮಾಜಿಕ ಹಾಗೂ ಸಮಾಸೇವಾ ಚಟುವಟಿಕೆಗಳ ಬಗ್ಗೆ ಮುರುಘಾ ರಾಜೇಂದ್ರ ಸ್ವಾಮೀಜಿಗಳಿಗೆ ವಿವರಿಸಿದರು.
ದೇವಸ್ಥಾನದಲ್ಲಿ ಚಂಡಿಕಾ ಹೋಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ನಡೆಯಿತು. ಸಂಜೆ ದೀಪೋತ್ಸವ ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರು ಆದಿಶಕ್ತಿ ಭಜನಾ ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ವೇಳೆ ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್ ಹೆಚ್ ಇದ್ದರು.