ಶಿವಮೊಗ್ಗ: ಜಾತ್ಯಾತೀತ ಜನತಾದಳ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಸಲೀಂ ಅಹಮದ್ ,ಸಚಿವ ಮಧುಬಂಗಾರಪ್ಪ, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ಗೀತಾ ಶಿವರಾಜ್‌ಕುಮಾರ್, ಕಲಗೋಡು ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಮತ್ತಿತರರು ಹಾಜರಿದ್ದರು.
ಎರಡೂವರೆ ದಶಕಗಳ ಕಾಲ ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸಂಘಟಿಸಿದ್ದ ಶ್ರೀಕಾಂತ್ ಅವರು, ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಗಣನೀಯ ಪ್ರಮಾಣದಲ್ಲಿ ಮತ ಪಡೆದಿದ್ದರು. ಈಗ ಅವರು ಕಾಂಗ್ರೆಸ್ ಸೇರಿರುವುದರಿಂದ ಪಕ್ಷಕ್ಕೆ ಬಲ ಬಂದಂತಾಗಿದೆ. ಶ್ರೀಕಾಂತ್ ಅವರೊಂದಿಗೆ ಮಾಜಿ ಮೇಯರ್ ನಾಗರಾಜ್ ಕಂಕಾರಿ, ಪಾಲಿಕೆ ಮಾಜಿ ಸದಸ್ಯರಾದ ರಾಜಣ್ಣ, ಪಾಲಾಕ್ಷಿ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ.
previous post