Malenadu Mitra
ರಾಜ್ಯ ಶಿವಮೊಗ್ಗ

ಅತಿ ಹಿಂದುಳಿದ ವರ್ಗಗಳ ಜನಜಾಗೃತಿ: ಚಿಂತನ- ಮಂಥನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ಹಾಗೂ ಅತಿ ಹಿಂದುಳಿದ ವರ್ಗಗಳ ಜನಜಾಗೃತಿ ವೇದಿಕೆ ವತಿಯಿಂದ ಅ.30 ರ ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಶಾಶ್ವತ ಹಿಂದು ಳಿದ ವರ್ಗ ಆಯೋಗದ ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಚಿಂತನ- ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ತೀ.ನ.ಶ್ರೀನಿವಾಸ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , 2018 ರಲ್ಲಿ ಮುಖ್ಯಮಂತ್ರಿ ಯಾಗಿದ್ದ ಸಿದ್ದರಾಮಯ್ಯ ಅವರು ಶಾಶ್ವತ ಹಿಂದುಳಿದ ವರ್ಗಗಳಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ತಯಾರಿಸಲು ಆದೇಶಿಸಿದ್ದರು ಎಂದರು೨.೧೫ ಲಕ್ಷ ಸರ್ಕಾರಿ ನೌಕರರು ಮನೆಮನೆಗೆ ಭೇಟಿ ನೀಡಿ ೫೬ ಅಂಶಗಳ ವರದಿಯನ್ನು ತಯಾರಿಸಿದ್ದರು. ಇದಕ್ಕೆ 165 ಕೋಟಿ ರೂ. ವೆಚ್ಚವಾಗಿದೆ ಎಂದರು.

ಹಿಂದುಳಿದ ವರ್ಗಗಳ ಸಮೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರಿಂದ ವರದಿ ತಯಾರಿಸಲು ಅಂದಿನ ಸರ್ಕಾರ ಆದೇಶ ನೀಡಿತ್ತು. ವರದಿ ತಯಾರಾಗಿ ಐದು ವರ್ಷಗಳಾಗಿದ್ದರೂ ಸಹ ಸರ್ಕಾರ ವರದಿಯನ್ನು ಬಹಿರಂಗ ಪಡಿಸದೆ ಜಾರಿಗೆ ತರುವಲ್ಲಿ ವಿಳಂಬ ಮಾಡುತ್ತಿದೆ ಎಂದರು.

ವರದಿ ಜಾರಿಗೆ ಗಟ್ಟಿಯಾಗಿ ಹಕ್ಕೊತ್ತಾಯಕ್ಕಾಗಿ ಹಾಗೂಹಿಂದುಳಿದ ವರ್ಗಗಳ ಬಲವನ್ನು ತೋರಿಸುವುದು ಅನಿವಾರ್ಯವಾಗಿರುವುದರಿಂದ ಈ ಚಿಂತನ ಮಂಥನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸರ್ಕಾರದ ಮೇಲೆ ಒತ್ತಡ ತರುವುದರ ಜೊತೆಗೆ ಮುಂದಿನ ಹೋರಾಟದ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಗುವುದು ಎಂದ ಅವರು, ಕಾಂತರಾಜ್ ವರದಿ ಜಾರಿಗೆ ಸರ್ಕಾರದ ಮೇಲೆ ಬಲವಾಗಿ ಒತ್ತಡ ಹಾಕುತ್ತಿರುವ ಬಿ.ಕೆ. ಹರಿಪ್ರಸಾದ್ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ಈ ಕಾರ್ಯ ಕ್ರಮ ಶಿವಮೊಗ್ಗ ಜಿಲ್ಲೆಯಿಂದಲೇ ಆರಂಭವಾಗುತ್ತಿದ್ದು, ನಂತರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಎಂದರು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಬಿ.ಕೆ. ಹರಿಪ್ರಸಾದ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ಹಿಂದುಳಿದ ಹಾಗೂ ಅತಿ ಹಿಂದುಳಿದ ವರ್ಗಗಳ ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸನ್ಮಾನಿಸಲಾಗುವುದು ಎಂದು ಸಂಚಾಲಕ ಆರ್.ಮೋಹನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿ.ವಿ. ಗಣೇಶಪ್ಪ, ಜಿ.ಪದ್ಮನಾಭ್, ವಿ. ಮುರುಗೇಶ್, ಬಿ. ರಾಮಚಂದ್ರ ನಾಯಕ್, ಸಿದ್ದಪ್ಪ ಇನ್ನಿತರರು ಉಪಸ್ಥಿತರಿದ್ದರು.

Ad Widget

Related posts

ಮಾರ್ಗಸೂಚಿ ಅನ್ವಯ ರಂಜಾನ್ ಆಚರಣೆ: ಚಿದಾನಂದ ವಟಾರೆ

Malenadu Mirror Desk

ಆಸ್ತಿ ತೆರಿಗೆ ಹೆಚ್ಚಳ ಮರುಪರಿಶೀಲನೆಗೆ ನಿರ್ಧಾರ

Malenadu Mirror Desk

ಭಗವದ್ಗೀತೆ ಎಲ್ಲರಿಗೂ ಮಾರ್ಗದರ್ಶಿ ; ಶ್ರೀ ಸ್ವಾಮಿ ಶಾರದೇಶಾನಂದಜೀ ಮಹಾರಾಜ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.