Malenadu Mitra
ರಾಜ್ಯ

ಶಿವಮೊಗ್ಗ ನಗರಕ್ಕೆ ಬಿ.ವೈ. ವಿಜಯೇಂದ್ರ

ಶಿವಮೊಗ್ಗ:ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಬಿ.ವೈ. ವಿಜಯೇಂದ್ರ ಅವರು ನ.೨೯ ಆಗಮಿಸುತ್ತಿದ್ದು, ನಗರದಲ್ಲಿ ಹಬ್ಬದ ವಾತವರಣ ಉಂಟಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ.
ಸುದ್ಧಿಗೋಷ್ಠಿಯಲ್ಲಿ   ಮಾತನಾಡಿದ ಅವರು, ನ.೨೯ರ ಬೆಳಿಗ್ಗೆ ೧೦.೩೦ಕ್ಕೆ ತೆರೆದ ವಾಹನದ ಜೊತೆಗೆ ಸುಮಾರು ಎರಡು ಸಾವಿರ ಬೈಕ್ ರ್‍ಯಾಲಿ ಮೂಲಕ ಬೆಕ್ಕಿನ ಕಲ್ಮಠದಿಂದ ಅಮ್ಮಿರ್‌ಹಮ್ಮದ್ ವೃತ್ತ, ಗೋಪಿವೃತ್ತ, ಜೈಲ್ ಸರ್ಕಲ್,ಲಕ್ಷ್ಮೀ ಟಾಕೀಸ್ ವೃತ್ತ, ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದವರೆಗೆ ಅಪಾರ ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಲಿದ್ದು, ಪ್ರೇರಣ ಸಭಾಂಗಣದಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
೬ ರಿಂದ ೭ ಸಾವಿರ ಜನ ಸೇರುವ ನಿರೀಕ್ಷೆ ಇದೆ. ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಸದ ಬಿ.ವೈ. ರಾಘವೇಂದ್ರ, ಕೆ.ಎಸ್.ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ ಚೆನ್ನಬಸಪ್ಪ,ಡಿ.ಎಸ್. ಅರುಣ್, ಎಸ್. ರುದ್ರೇಗೌಡ, ಮಾಜಿ ಶಾಸಕರಾದ ಅಶೋಕ್ ನಾಯಕ್, ಅರತಾಳ್ ಹಾಲಪ್ಪ ಸ್ವಾಮಿರಾವ್‌ಸೇರಿದಂತೆ ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು ಗಣ್ಯರು, ಕಾರ್ಯಕರ್ತರು, ಭಾಗವಹಿಸಲಿದ್ದಾರೆ. ಅಭಿಮಾನದ ಅಭಿನಂದನೆ ಕಾರ್ಯಕ್ರಮದ ನಂತರ ನೂತನ ಅಧ್ಯಕ್ಷರು ಜಿಲ್ಲೆಯ ಹಿರಿಯರ ಮನೆಗೆ ಭೇಟಿ ನೀಡಿ, ಆಶೀರ್ವಾದ ಪಡೆಯಲಿದ್ದಾರೆ. ಈಡೀ ಜಿಲ್ಲೆಯಲ್ಲಿ ಸಂಭ್ರಮ ಸಡಗರದ ವಾತಾವರಣ ನಿರ್ಮಾಣವಾಗಿದೆ. ನಗರದವನ್ನು ನವವಧುವಿನಂತೆ ಸಿಂಗರಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದು, ಎಲ್ಲರಿಗೂ ಪ್ರೇರಣೆ ನೀಡಿದೆ ಎಂದರು.

ವಿಶೇಷವಾಗಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿನೀಡಿ ಸಮಾಲೋಚನೆ ನಡೆಸುವುದರ ಜೊತೆಗೆ ಬೂತ್ ಅಧ್ಯಕ್ಷರ ಮನೆಗೆ ಬೇಟಿ ನೀಡಲಿದ್ದಾರೆ. ಸಂಘಟನೆಯ ಕೆಳಸ್ತರದ ಪದಾಧಿಕಾರಿಗಳ ಜೊತೆಗೂ ಚರ್ಚಿಸಲಿದ್ದಾರೆ ಎಂದರು.
ನ.೩೦ರಂದು ಶಿಕಾರಿಪುರದಲ್ಲಿ ೨೦ ಸಾವಿರ ಜನರ ಬಹಿರಂಗ ಸಭೆ ಏರ್ಪಡಿಸಲಾಗಿದೆ. ಅಲ್ಲಿ ನೂತನ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ವಿಜೇಂದ್ರರವರಿಗೆ ಜಿಲ್ಲೆಯ ಪರವಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.ಶಿಕಾರಿಪುರದ ಹಳೆ ಸಂತಕಟ್ಟೆ ಮೈದಾನದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದ್ದು, ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಸಭೆಯ ಸ್ಥಳವನ್ನು ತಲುಪಲಿದ್ದಾರೆ ಎಂದರು.

ಸಾರ್ವಜನಿಕರು ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸುವಂತೆ ಅವರು ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಚೆನ್ನಬಸಪ್ಪ, ಡಿ.ಎಸ್. ಅರುಣ್, ಎಸ್. ರುದ್ರೇಗೌಡ ಪ್ರಮುಖರಾದ ಕೆ.ಬಿ. ಅಶೋಕ್ ನಾಯಕ್, ಎಸ್. ದತ್ತಾತ್ರಿ, ಶಿವರಾಜ್, ಶ್ರೀನಾಥ್, ರತ್ನಾಕರ್ ಶೆಣೈ, ಅಣ್ಣಪ್ಪ ಮತ್ತಿತರರು ಇದ್ದರು.

Ad Widget

Related posts

ವಿಐಎಸ್‍ಎಲ್‍ನಲ್ಲಿ ವಾರದೊಳಗಾಗಿ ಆಕ್ಸಿಜನ್ ಉತ್ಪಾದನೆ ಆರಂಭಿಸಲು ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಲಕ್ಕಿನಕೊಪ್ಪ ಸುತ್ತಮುತ್ತ ಮತ್ತೆ ಕಾಡಾನೆ ಹಾವಳಿ, ಅಪಾರ ಬೆಳೆ ನಷ್ಟ

Malenadu Mirror Desk

ಜೂ 3ಕ್ಕೆ ನಗರಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಸಚಿವರ ಸ್ವಾಗತಕ್ಕೆ ಕಾಂಗ್ರೆಸ್‌ನಿಂದ ಸಿದ್ಧತೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.