Malenadu Mitra
Uncategorized

ಕುಂಸಿ ಕೆರೆ ಕೋಡಿ ಬಳಿ ಕಾರು ಅಪಘಾತ: ಸಿಗಂದೂರಿಗೆ ಹೊರಟಿದ್ದ ಯುವಕ ಧಾರುಣ ಸಾವು

ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ.
ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಕುಂಸಿ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಮಡಿಕೇರಿ ಮೂಲದ ನಂದನ್(22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ ಹಾಸನ ಮೂಲದ ಭರತ್(20) ಗಾಯಗೊಂಡ ಯುವಕರು.

ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬಂದಿದ್ದ ಯುವಕರು.
ಬೆಂಗಳೂರಿನ ಯಲಹಂಕದಲ್ಲಿರುವ ಅಮೃತಹಳ್ಳಿ ವಿಬಿಎಸ್ ಅಯ್ಯಂಗಾರ್ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ 5 ಜನ ಯುವಕರು ಇಂದು ಬೇಕರಿಗೆ ರಜೆ ಇದ್ದ ಕಾರಣ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳಲು ನಿರ್ಧರಿಸಿದ್ದರು. ಅದರಂತೆ ನಿನ್ನೆ ರಾತ್ರಿ ವೇಳೆಗೆ ಬೆಂಗಳೂರಿನಿಂದ ಹೊರಟ್ಟಿದ್ದರು. ಇಂದು ಬೆಳಿಗ್ಗೆ ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಕುಂಸಿಯ ಕೆರೆ ಕೋಡಿ ಬಳಿ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಗದ್ದೆಗೆ ಬಿದ್ದಿದೆ. ಕಾರು ಚಾಲನೆ ಮಾಡುತ್ತಿದ್ದ ಚಂದನ್ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ಇತರ ಯುವಕರು ಸಹ ಗಾಯಗೊಂಡಿದ್ದು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

ಪಂಚಾಯತ್‍ರಾಜ್ ಇಲಾಖೆ ಸಿಬ್ಬಂದಿ ಕೊರೊನ ವಾರಿಯರ್ಸ್ ಕೆ.ಎಸ್.ಈಶ್ವರಪ್ಪ

Malenadu Mirror Desk

ಶತಕ ದಾಟಿದ ಪೆಟ್ರೋಲ್ ಬೆಲೆ: ಸಿಎಂ ತವರಿನಲ್ಲಿ ಅಣಕು ಸಂಭ್ರಮಾಚರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.