Malenadu Mitra
ಜಿಲ್ಲೆ

ಶಿವಮೊಗ್ಗ: 18 ರಿಂದ ಕೃಷಿ, ತೋಟಗಾರಿಕೆ ಮೇಳ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ

ಶಿವಮೊಗ್ಗ: ಇಲ್ಲಿನ ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಅ 18 ರಿಂದ 21ರವರೆಗೆ ಕೃಷಿ ಮತ್ತು ತೋಟಗಾರಿಕಾ ಮೇಳ ಆಯೋಜಿಸಲಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಗೆ ವಿಜ್ಞಾನ ವಿಶ್ವ ವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್ ಹೇಳಿದರು.

‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧ್ಯೇಯದೊಂದಿಗೆ ಈ ವರ್ಷದ ಮೇಳ ಆಯೋಜಿಸಲಾಗಿದೆ. ವಿವಿ ವ್ಯಾಪ್ತಿಗೆ ಬರುವ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಾಧನೆಗೈದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇಳದಲ್ಲಿ  ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಹೈ-ಟೆಕ್ ತೋಟಗಾರಿಕೆ-ಹೈಡೋಫೋನಿಕ್ ಕೃಷಿ, ಪುಷ್ಪ ಕೃಷಿ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಸಾವಯವ ಕೃಷಿ, ಅಣಬೆ ಬೇಸಾಯ, ಸಮಗ್ರ ಜಲಾನಯನ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಲ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹವಾಮಾನ ಆಧಾರಿತ ಕೃಷಿ, ಅಡಿಕೆಯಲ್ಲಿ ಬಹುಸ್ತರೀಯ ಪದ್ಧತಿ, ಅಡಿಕೆ ಬೆಳೆಯ ಸಮಗ್ರ ಕೃಷಿ ಪದ್ಧತಿ, ಪಾರಂಪರಿಕ ಅಡಿಕೆ ಸಂಸ್ಕರಣಾ ಕ್ರಮಗಳು, ಅಡಿಕೆಯ ವಿವಿಧ ತಳಿಗಳು, ಅಡಿಕೆ ಸಂಸ್ಕರಣೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳು, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ ಏರ್ಪಡಿಸಲಾಗಿದೆ ಅಲ್ಲದೇ ಶ್ರೇಷ್ಟ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದ ಅವರು, ಅಲ್ಲದೇ ಕೃಷಿ ಮೇಳದ ತಾಂತ್ರಿಕ ಸಮಾವೇಶದಲ್ಲಿ ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆಯನ್ನು ಕೊಡಿಸಲಾಗುವುದು ಎಂದರು.

ಕೃಷಿಯಿಂದ ಪೋಷಕಾಂಶ-ಭರಿತ ಉತ್ಪಾದಕತೆ ಮತ್ತು ಗುಣಮಟ್ಟವನ್ನು ಸುಧಾರಿಸುವ ಮೇಲೆ ಕೇಂದ್ರೀಕರಿಸುವ ಕೃಷಿ ಮತ್ತು ಆಹಾರ ಉತ್ಪಾದನಾ ನೀತಿಗಳು ಅವುಗಳ ಉತ್ಪಾದನೆಯನ್ನು ಹೆಚ್ಚಿಸುತ್ತವೆ ಇದಲ್ಲದೆ, ಈ ಸಮೃದ್ಧ ಪೌಷ್ಟಿಕಾಂಶದ ಪದಾರ್ಥಗಳನ್ನು ಸೇವಿಸುವ ಜನರು ತಮ್ಮ ಪೌಷ್ಟಿಕಾಂಶವನ್ನು ಸುಧಾರಿಸಲು ಮತ್ತು ಆರೋಗ್ಯಕರವಾಗಿ ಬದುಕಲು ನಾಗರಿಕರಿಗೆ ಸಹಾಯ ಮಾಡುತ್ತದೆ. ಆಹಾರವು ಕೃಷಿ ಪದ್ಧತಿಗಳ ಪ್ರಮುಖ ಉಪ ಉತ್ಪನ್ನವಾಗಿದೆ ಮತ್ತು ಇದರ ಪರಿಣಾಮವಾಗಿ, ಆರೋಗ್ಯಕರ ಪೋಷಣೆಯ ಪ್ರಮುಖ ಅಂಶವಾಗಿದೆ. ಹೆಚ್ಚಿನ ಪುರಾವೆಗಳು, ಸಂಶೋಧನೆಯು ಕೇವಲ ಆಹಾರವನ್ನು ಹೊಂದಿರುವುದಕ್ಕಿಂತ ಹೆಚ್ಚಿನ ಪೋಷಣೆಯಿದೆ ಎಂದು ತೋರಿಸುತ್ತದೆ. ಜನರು ಸೇವಿಸುವ ಆಹಾರವು ಪೌಷ್ಟಿಕವಾಗಿರಬೇಕು ಅಂದರೆ, ಆಹಾರವು ಸರಿಯಾದ ಬೆಳವಣಿಗೆ ಮತ್ತು ಬೆಳವಣಿಗೆಗೆ ನಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ಅಂಶಗಳನ್ನು ಮತ್ತು ಪೋಷಣೆಯನ್ನು ಹೊಂದಿರುತ್ತದೆ. ಆದ್ದರಿಂದ, ನಾವು ಸೇವಿಸುವ ಆಹಾರವು ಸರಿಯಾದ ಪೋಷಕಾಂಶಗಳೊಂದಿಗೆ ಸಮತೋಲನದಲ್ಲಿರಬೇಕು. ಈ ಸಂದರ್ಭದಲ್ಲಿ ಅತಿ ಹೆಚ್ಚು ಸೂಕ್ತ ರಾಗಿ, ಜೋಳ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ವಿಕಸಿತ ಕೃಷಿಯನ್ನು ಕಾಪಾಡಿಕೊಳ್ಳಲು ಸಾದ್ಯವಾಗುತ್ತದೆ ಎಂಬಂತಹ ವಿಚಾರಗಳನ್ನು ಈ ಕೃಷಿ-ತೋಟಗಾರಿಕೆ ಮೇಳದಲ್ಲಿ ಮನದಟ್ಟು ಮಾಡಲು ಪ್ರಯತ್ನಿಸಿದ್ದೇವೆ ಎಂದರು.

ಸಮಾವೇಶದಲ್ಲಿ ವಿಕಸಿತ ಕೃಷಿಯಲ್ಲಿ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ, ಅಡಿಕೆ ಬೆಳೆಯಲ್ಲಿ ಸಮಗ್ರ ರೋಗ ನಿರ್ವಹಣೆ, ಅಡಿಕೆ ಉಪಉತ್ಪನ್ನಗಳ ಸದ್ಬಳಕೆ, ಅಡಿಕೆ ಮಾರುಕಟ್ಟೆ ವ್ಯವಸ್ಥೆ ಮತ್ತು ಮೌಲ್ಯವರ್ಧನೆ ಮತ್ತಿತರ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ

ಅ.೧೯ರಂದು ಸಧೃಡ ಭಾರತಕ್ಕಾಗಿ ವಿಕಸಿತ ಕೃಷಿ, ಕೃಷಿಯಲ್ಲಿ ಸುಸ್ಥಿರತೆಗೆ ಅರಣ್ಯ ಕೃಷಿ, ಪಶು ಸಂಗೋಪನೆ-ಆಹಾರ ಭದ್ರತೆ, ಕೃಷಿಯಲ್ಲಿ ಡೋನ್ ಬಳಕೆ. ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ ಎಂದರು.

ಅ.೨೦ರಂದು ವೈಜಾನಿಕ ಶುಂಠಿ ಮತ್ತು ಕಾಳುಮೆಣಸು ಕೃಷಿ, ಕಾಳುಮೆಣಸು ಕೃಷಿ- ರೈತರ ಅನುಭವ, ಗೋಡಂಬಿ ಬೆಳೆ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ, ಕೃಷಿ ನವೋದ್ಯಮ ಮತ್ತು ಸೆಕೆಂಡರಿ ಕೃಷಿ, ಸಾಂಬಾರು ಬೆಳೆಗಳ ಮೌಲ್ಯವರ್ಧನೆ ವಿಷಯಗಳ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ. ಇದರ ಜೊತೆಯಲ್ಲಿ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು  ತಿಳಿಸಿದರು.

ಕೃಷಿ ಮೇಳದ ಸಂದರ್ಭದಲ್ಲಿ ಕೃಷಿ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆಯ ‘ಸಸ್ಯಕಾಶಿ’ಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಮತ್ತು ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಹ ಕೈಪಿಡಿಗಳ ಬಿಡುಗಡೆ ಮಾಡಲಾಗುವುದು.ಅಲ್ಲದೇ ಕೃಷಿ ಪರಿಕರ ವಿತರಕರು, ವಿಜ್ಞಾನಿಗಳು ಹಾಗೂ ಪ್ರಗತಿಪರ ರೈತ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದವನ್ನು ಏರ್ಪಡಿಸಲಾಗಿದೆ. ಈ ಮೇಳದಲ್ಲಿ ಮೀನುಗಾರಿಕೆ, ಯಂತ್ರೋಪಕರಣಗಳು, ಪಶು ಸಂಗೋಪನೆ ಸೇರಿದಂತೆ ವಿವಿಧ ರೀತಿಯ ೨೦೦ಕ್ಕೂ ಹೆಚ್ಚಿನ ಸ್ಟಾಲ್‌ಗಳನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ಪ್ರಮುಖರಾದ ವಿಸ್ತರಣಾ ನಿರ್ದೇಶಕ ಡಾ.ಕೆ.ಟಿ.ಗುರುಮೂರ್ತಿ, ಶಿಕ್ಷಣ ನಿರ್ದೇಶಕ ಡಾ.ಹೇಮ್ಲಾ ನಾಯ್ಕ್, ಕೃಷಿ ಡೀನ್ ಡಾ. ಡಿ. ತಿಪ್ಪೇಶ್ ಇದ್ದರು.

Ad Widget

Related posts

ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭೀಕರ ಅಪಘಾತ- ಇಬ್ಬರು ಯುವಕರು ಸಾವು

Malenadu Mirror Desk

ನಿರ್ಮಲ ತುಂಗಾಭದ್ರಾ ಅಭಿಯಾನ : ನಾಳೆ ಶಿವಮೊಗ್ಗದಲ್ಲಿ ‘ತುಂಗಾ ಆರತಿ’

Malenadu Mirror Desk

ಸಂಸದರು ಪಬ್ಲಿಸಿಟಿ ಸ್ಟಂಟ್ ನ ಹಳೆ ಚಾಳಿ ಬಿಡಲಿ : ಮಧು ಬಂಗಾರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.