ಶಿವಮೊಗ್ಗ: ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಭೇತಿ ನೀಡುತ್ತಿದ್ದ ವೇಳೆ, ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.
ಸಾಗರ ತಾಲೂಕಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹೀರೆಮಠ ಮೃತ ದುರ್ದೈವಿ.
ಶಿಕ್ಷಕ ಗಜಾನನ ಹಿರೇಮಠ ಅವರು ಕ್ರಾಫ್ಟ್ ಜೊತೆಗೆ ಮಕ್ಕಳಿಗೆ ವಿವಿಧ ಕ್ರೀಡೆಗಳ ಬಗ್ಗೆ ತರಬೇತಿ ನೀಡುತ್ತಿದ್ದರು. ಇಂದು ಕೂಡ ಶಿಕ್ಷಕ ಗಜಾನನ ಹಿರೇಮಠ ಅವರು ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಗಜಾನನ ಹೀರೆಮಠ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಮಾರ್ಗಮಧ್ಯದಲ್ಲಿ ಅವರು ಅಸುನೀಗಿದ್ದಾರೆ. ಮೃತ ಶಿಕ್ಷಕ ಗಜಾನನ ಹೀರೆಮಠ ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.
ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ.ಈ., ಮಲೆನಾಡು ಅಭಿವೃದ್ದಿ ಪ್ರತಿಷ್ಟಾನದ ಪದಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.