ಸಾಗರ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹಿರಿಯ ರಾಜಕಾರಣಿ, ವಿಧಾನಸಭಾ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಶಿವಮೊಗ್ಗದಿಂದ ಸೊರಬಕ್ಕೆ ತೆರಳುವ ಮಾರ್ಗ ಮಧ್ಯೆ ಸಾಗರ ನಗರದಲ್ಲಿರುವ ಕಾಗೋಡು ನಿವಾಸಕ್ಕೆ ಭೇಟಿ ನೀಡಿ, ಪಕ್ಷದ ಹಿರಿಯ ಮುಖಂಡರಾದ ಕಾಗೋಡು ತಿಮ್ಮಪ್ಪರ ಆರೋಗ್ಯದ ಬಗ್ಗೆ ವಿಚಾರಿಸಿದ್ರು.,
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಜೊತೆ ಕೆಲಕಾಲ ಮಾತುಕತೆ ನಡೆಸಿದ ಹೋಮ್ ಮಿನಿಸ್ಟರ್ ಪರಮೇಶ್ವರ್, ಚಹಾ ಕುಡಿದು ನಿರ್ಗಮಿಸಿದ್ರು.
ಈ ವೇಳೆ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಶ್ ಬಾನು, ಮಂಜುನಾಥ್ ಭಂಡಾರಿ, ಸೂಡಾ ಅದ್ಯಕ್ಷ ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ಉಪಸ್ಥಿತರಿದ್ದರು.