ಶಿವಮೊಗ್ಗ : ನಗರದ ವಿನೋಬನಗರ- ಸೋಮಿನಕೊಪ್ಪ ವ್ಯಾಪ್ತಿಯಲ್ಲಿ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬಿ.ಪಿ.ಕಮಲಾ (35) ಮೃತ ಮಹಿಳೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ತಾಳಗುಪ್ಪ- ಮೈಸೂರು ರೈಲಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ರೈಲು ಢಿಕ್ಕಿಯಾದ ರಭಸಕ್ಕೆ ಮಹಿಳೆಯ ದೇಹ ಸಂಪೂರ್ಣ ಛಿದ್ರಗೊಂಡಿದೆ.
ಕೌಟುಂಬಿಕ ಸಮಸ್ಯೆ ಹಿನ್ನೆಲೆ ಮಹಿಳೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆ ಸಂಬಂಧ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರದ ದಾಖಲಾಗಿದೆ.
previous post