Malenadu Mitra
Uncategorized ರಾಜ್ಯ ಶಿವಮೊಗ್ಗ

ಶರಾವತಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರವೇ ಟಾಸ್ಕ್ ಫೋರ್ಸ್ : ರೈತರೊಂದಿಗಿನ ಸಭೆಯಲ್ಲಿ ಸಿಎಸ್ ಭರವಸೆ

ಬೆಂಗಳೂರು : ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನ‌ ಸಮಸ್ಯೆ ಪರಿಹಾರ ಕುರಿತು ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಭೂಮಿ ಹಕ್ಕಿನ ಸಮಸ್ಯೆಗೆ ಶಾಸನಾತ್ಮಕ ಪರಿಹಾರ ಒದಗಿಸುವ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನ ಸೌಧದಲ್ಲಿ ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು ಹಾಗೂ ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಶರಾವತಿ ಮುಳುಗಡೆ ಸಂತ್ರಸ್ಥರ ಪರವಾಗಿ ರಾಜ್ಯ ಸರ್ಕಾರವಿದೆ. ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಸಮಸ್ಯೆ ಕುರಿತು ಶಾಸನಾತ್ಮಕ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಸಿಎಂ ಜೊತೆಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

“ಸುಪ್ರೀಂ ಕೋರ್ಟ್ ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದಂತೆ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ನುರಿತ ವಕೀಲರನ್ನು ನೇಮಕ ಮಾಡಲಾಗಿದೆ. ಇದನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು.”

    – ಮಧು ಬಂಗಾರಪ್ಪ, ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು.

ಮೂರು ಎಕರೆಗಿಂತ ಕೆಳಗಿನ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೋಟೀಸ್ ನೀಡಿ ದಬ್ಬಾಳಿಕೆ ಮಾಡುತ್ತಿರುವ ಬಗ್ಗೆ ರೈತರ ನಿಯೋಗದ ಮುಖಂಡರಾದ ತೀ.ನಾ ಶ್ರೀನಿವಾಸ್ ಸಭೆಯಲ್ಲಿ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಅರಣ್ಯಾಧಿಕಾರಿಗಳು ರೈತ ವಿರೋಧಿ ಕ್ರಮವನ್ನು ಕೈಗೊಂಡರೇ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಳುಗಡೆ ಆಗದ ಕೆಪಿಸಿ ಭೂಮಿಯನ್ನು  ಸಕ್ರಮೀಕರಣಗೊಳಿಸುವ ಕುರಿತು ಪುನರ್ ಸರ್ವೆ ಮಾಡಬೇಕು. ಈ ಕುರಿತು ನ್ಯಾಯಾಲಯದಲ್ಲಿ ವಾದಿಸಲು ಸರ್ಕಾರ ಕಠಿಣಾತ್ಮಕ ಹೆಜ್ಜೆ ಇಡಬೇಕು ಎಂದು  ರೈತ ಮುಖಂಡರು ಸರ್ಕಾರದ ಗಮನ ಸೆಳೆದಿದ್ದು, ಈ ಬಗ್ಗೆ ಕ್ರಮ ವಹಿಸುವ ಕುರಿತು ಮುಖ್ಯ ಕಾರ್ಯದರ್ಶಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.
ಸಭೆಯಲ್ಲಿ ರೈತ ಮುಖಂಡರಾದ ತೀ.ನಾ ಶ್ರೀನಿವಾಸ್, ಬಿ.ಆರ್ ಜಯಂತ್,ವಿ.ಜಿ ಶ್ರೀಕರ್, ದಿನೇಶ್ ಶಿರಿವಾಳ, ಜಿ.ಟಿ‌.ಸತ್ಯನಾರಾಯಣ್, ದೂಗುರು ಪರಮೇಶ್ವರ್, ಬಿ.ಎ ರಮೇಶ್ ಹೆಗಡೆ, ವಕೀಲರಾದ ಧರ್ಮರಾಜ್ ಸೇರಿದಂತೆ ಹಲವರಿದ್ದರು.

Ad Widget

Related posts

ಪೊಲೀಸ್ ಪೇದೆ ಎದೆಗೆ ಚಾಕು ಹಾಕಿದ್ದ ಆರೋಪಿಯ ಕಾಲಿಗೆ ಫೈರಿಂಗ್ ಮೆಗ್ಗಾನ್‌ನಲ್ಲಿ ಚಿಕಿತ್ಸೆ, ಪೇದೆಗೆ ಗಾಯ

Malenadu Mirror Desk

ನ್ಯಾಯಯುತ ಹಕ್ಕುಗಳನ್ನು ಪಡೆಯಲು ಈಡಿಗ ಸಮಾಜ ಸಂಘಟಿತವಾಗಬೇಕು, ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಯೋಗೇಂದ್ರ ಗುರೂಜಿ ಅಭಿಮತ

Malenadu Mirror Desk

ವಿಮಾನ ನಿಲ್ದಾಣಕ್ಕೆರಾಷ್ಟ್ರಕವಿ ಕುವೆಂಪು ಹೆಸರಿಡಲು ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.