Malenadu Mitra
ಜಿಲ್ಲೆ ಶಿವಮೊಗ್ಗ

ಟ್ರಂಚ್ ಗೆ ಬಿದ್ದು, ಕಾಡಾನೆ ಸಾವು

ಶಿವಮೊಗ್ಗ: ಆನೆಗಳ ಹಾವಳಿ ತಡೆಗೆ ತೆಗೆಯಲಾಗಿದ್ದ ಟ್ರಂಚ್‌ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿದೆ.
ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಎರಡು ದಿನದ ಹಿಂದೆಯೇ ಕಾಡಾನೆ ಟ್ರಂಚ್‌ ಒಳಗೆ ಬಿದ್ದಿದೆ ಎನ್ನಲಾಗಿದ್ದು, ಅದರಿಂದ ಮೇಲೆ ಬರಲಾಗದೇ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಆನೆ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಆನೆಯ ಕಳೆಬರಹದ ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಹೆಚ್ಚಾಗಿದ್ದ ಕಾಡಾನೆ ಕಾಟ- ಕಾರ್ಯಾಚರಣೆ ಆರಂಭಿಸಿದ್ದ ಇಲಾಖೆ :

ಇನ್ನು ಶಿವಮೊಗ್ಗ ಗ್ರಾಮಾಂತರ ಭಾಗದ ಸಿರಿಗೆರೆ, ಆಯನೂರು, ಆಲದೇವರ ಹೊಸೂರು, ಪುರದಾಳು ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿತ್ತು. ಈ ಆನೆಗಳನ್ನು ಇಲ್ಲಿಂದ ಓಡಿಸಬೇಕು ಅಥವಾ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು. ಹಾಗಾಗಿ ಸೆಕ್ರೆಬೈಲು ಬಿಡಾರದಿಂದ ಮೂರು ಆನೆಗಳನ್ನು ತಂದು ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ನಡುವೆಯೇ ಆನೆಯೊಂದು ಮೃತಪಟ್ಟಿದೆ.

Ad Widget

Related posts

ಕೋವಿಡ್ ನಿಯಮಾನುಸಾರ ಅಭಿವೃದ್ಧಿ ಕಾಮಗಾರಿ: ಡಿ.ಸಿ

Malenadu Mirror Desk

ಒಂದೇ ಚುನಾವಣೆಯಿಂದ ದೇಶದ ಏಳಿಗೆ

Malenadu Mirror Desk

1803 ಅಡಿ ದಾಟಿದ ಲಿಂಗನಮಕ್ಕಿ ಜಲಾಶಯ, ಮಲೆನಾಡಿನತ್ತ ಪ್ರವಾಸಿಗರ ದಂಡು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.