ಶಿವಮೊಗ್ಗ : ಲಾರಿ ಡಿಕ್ಕಿಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ ಗೆ ಹೊಸನಗರದಿಂದ ರಿಪ್ಪನ್ ಪೇಟೆ ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ಚರಂಡಿಗೆ ಉರುಳಿ, ನಂತರ ಪಲ್ಟಿಯಾಗಿದೆ.
ಬಸ್ ನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಸುಮಾರು 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲು ಪೊಲೀಸ್ ಅಧಿಕಾರಿ- ಸಿಬ್ಬಂದಿಗಳು ನೆರವು ಸಹ ನೀಡಿದ್ದಾರೆ.
previous post