ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಆರಂಭವಾಗಿದೆ.
ತೀರ್ಥಹಳ್ಳಿ ಪಟ್ಟಣದ ಕಮಾನು ಸೇತುವೆ ಬಳಿ ಘಟನೆ ನಡೆದಿದ್ದು, ನದಿಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಥಳದಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ದೊರೆತ ಮೊಬೈಲ್ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕು ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು, ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಬ್ಯಾಂಕ್ ಮ್ಯಾನೇಜರ್ ಒಬ್ಬರೇ ಇದ್ದರು. ಸಂಬಂಧಿಕರು ಚೆನ್ನೈ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕವಷ್ಟೇ ಯಾರು, ಎನು? ಎಂಬುದರ ಕುರಿತು ಮಾಹಿತಿ ಲಭ್ಯವಾಗಲಿದೆ.