ಶಿವಮೊಗ್ಗ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸೀನಿಯರ್ಸ್ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಗೆ ಶಿವಮೊಗ್ಗದ ಅದಿತಿ. ಆರ್ ಅಯ್ಕೆಯಾಗಿದ್ದಾರೆ.
ಡಿಸೆಂಬರ್ 4 ರಿಂದ 16 ವರೆಗೆ ಹರಿಯಾಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿದ್ದು, ಶಿವಮೊಗ್ಗದ ಅದಿತಿ ರಾಜೇಶ್ ರಾಜ್ಯ ತಂಡವನ್ನ ಪ್ರತಿನಿಧಿಸಲಿದ್ದಾರೆ.
ಅಂತರಾಷ್ಟ್ರೀಯ ಕ್ರೀಡಾಪಟು ವೇದಾ ಕೃಷ್ಣಮೂರ್ತಿ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ.
ಶಿವಮೊಗ್ಗದ ಅದಿತಿ ರಾಜೇಶ್ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ಅದಿತಿ ಆಯ್ಕೆಗೆ ಶಿವಮೊಗ್ಗದ ಕ್ರೀಡಾಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
previous post