ಶಿವಮೊಗ್ಗ: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಡಿಸೆಂಬರ್ 3 ) ರಜೆ ಘೋಷಿಸಿ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಶಿವಮೊಗ್ಗ ಜಿ.ಪಂ ಸಿಇಓ ಹೇಮಂತ್. ಎನ್ ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮವಾಗಿ
ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಮೋಡ ಕವಿದ ವಾತವರಣದ ಜೊತೆ ನಿನ್ನೆ ಸಂಜೆ ಜಿಲ್ಲೆಯ ಕೆಲವೆಡೆ ಮಳೆ ಕೂಡ ಸುರಿದಿತ್ತು.
ಮುಂದುವರಿದು ಡಿ.3 ಮತ್ತು 4ರಂದು ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ವಹಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.