Malenadu Mitra
ರಾಜ್ಯ ಶಿವಮೊಗ್ಗ

ಸೊರಬ ನಿವಾಸಿಗಳ ಸಮ್ಮೀಲನ -24 : ಟ್ರೋಲ್ ಬಗ್ಗೆ ಡೋಂಟ್ ಕೇರ್ ಎಂದ ಮಧು ಬಂಗಾರಪ್ಪ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ನನ್ನ ಮೇಲೆ ನಂಬಿಕೆ ಇಟ್ಟು, ಶಿಕ್ಷಣ ಖಾತೆ ನೀಡಿದ್ದಾರೆ. ಅದನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಸಿಎಂ ಕೂಡ ನಮ್ಮ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಟ್ರೋಲ್ ಗಳ ಕುರಿತು ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದ ಬೆಂಗಳೂರು ನಿವಾಸಿಗಳ ಸಮ್ಮೀಲನ-2024ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ತಂದೆ ಬಂಗಾರಪ್ಪರನ್ನು ಗೆಲ್ಲಿಸಿ ರಾಜ್ಯದ ಮುಖ್ಯಮಂತ್ರಿ ಮಾಡುವಲ್ಲಿ ಮತ್ತು ನನ್ನನ್ನ ಎರಡು ಬಾರಿ ಗೆಲ್ಲಿಸಿ, ಈಗ ಮಂತ್ರಿಯನ್ನಾಗಿ ಮಾಡಿದ್ದೀರಿ.ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ.ಯಾವುದೇ ಸಮಯದಲ್ಲಿ ಮನೆಗೆ ತಮ್ಮ ಸಮಸ್ಯೆಗಳನ್ನು ಹೊತ್ತು ತನ್ನಿ ಸಾಧ್ಯವಾದಷ್ಟು ಅದಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

‘ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಂದ ಸೊರಬ ತಾಲೂಕಿನ ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಸದ್ಯ ಸರ್ಕಾರದಿಂದ ಸುಮಾರು 250ಕೋಟಿ ರೂ. ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು.’

 

ಮಧು ಬಂಗಾರಪ್ಪ : ಶಿಕ್ಷಣ ಸಚಿವ

ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪ, ಶಿವರಾಜ ಕುಮಾರ್ ಅವರು ಆರೋಗ್ಯವಾಗಿದ್ದಾರೆ. ಸಣ್ಣ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ಅವರು ಅಮೆರಿಕಾಕ್ಕೆ ತೆರಳಲಿದ್ದು, ಒಂದು ವಾರಗಳ ಕಾಲ ತಾವು ಅವರ ಜತೆಯಲ್ಲಿ ಇರುವುದಾಗಿ ತಿಳಿಸಿದರು.


ಬಂಗಾರಪ್ಪ ಅವರ ಹಿರಿಯ ಪುತ್ರಿ ಸುಜಾತ ತಿಲಕ್ ಕುಮಾರ್ ಮಾತನಾಡಿ, ಸಂಬಂಧಗಳನ್ನು ಬೆಸೆಯುವ ಇಂತಹ ಸಮ್ಮೀಲನ ಕಾರ್ಯಕ್ರಮ ನಡೆಯುತ್ತಿರಬೇಕು. ವಿಶೇಷವಾಗಿ ಮಲೆನಾಡಿನ ಕೊಟ್ಟೆ ಕಡಬು, ಕಜ್ಜಾಯ, ಕೋಳಿಸಾರು ಹೀಗೆ ವಿವಿಧ ತಿನಿಸುಗಳ ಪರಿಚಯವನ್ನು ಬೆಂಗಳೂರು ಜನತೆಗೆ ಮಾಡಿಸಬೇಕು ಎಂದರು.
ಇನ್ನು ಸೊರಬ ನಿವಾಸಿಗಳು ಹಾಗೂ ಅವರ ಮಕ್ಕಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡಿತ್ತು.
ಕಾರ್ಯಕ್ರಮದಲ್ಲಿ ಸಮ್ಮೀಲನ-24ರ ಸಂಚಾಲಕರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ ಏಕಾಂತಪ್ಪ, ವಕೀಲರಾದ ಕೇಶವಮೂರ್ತಿ ಹಾಲಗಳಲೆ, ಕುಮಾರಸ್ವಾಮಿ ಹೊಸೂರು, ದಯಾನಂದ ಬಿದರಗೆರೆ, ಮುಕುಂದ ಹಿರೇಇಡಗೋಡು, ಅನಿಲ್, ಗಣಪತಿ ಹಳೇ ಸೊರಬ ಮತ್ತಿತರರು ಭಾಗವಹಿಸಿದ್ದರು.

Ad Widget

Related posts

ಆಕ್ಸಿಜನ್, ವೆಂಟಿಲೇಟರ್ ಕೊರತೆ ಇಲ್ಲ

Malenadu Mirror Desk

ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Malenadu Mirror Desk

ಜನವಿರೋಧಿ ಸರಕಾರಗಳು: ಬಾಸೂರು ಚಂದ್ರೇಗೌಡ ಆರೋಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.