Malenadu Mitra
ರಾಜ್ಯ ಶಿವಮೊಗ್ಗ ಸಾಗರ

ಜೋಗದಲ್ಲಿ ಅಭಿವೃದ್ಧಿ ಕಾಮಗಾರಿ: ಪ್ರವಾಸಿಗರಿಗೆ ಮೂರು ತಿಂಗಳು ನಿರ್ಭಂದ

ಶಿವಮೊಗ್ಗ : ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಮೂರು ತಿಂಗಳ ಕಾಲ ನಿರ್ಬಂಧ ವಿಧಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, 2025 ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮನವಿ ಮಾಡಿದ್ದಾರೆ.

Ad Widget

Related posts

ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ

Malenadu Mirror Desk

ಸಿದ್ದರಾಮಯ್ಯ ಕಾಲದಲ್ಲಿ ರಸ್ತೆಯಲ್ಲಿ ವಜ್ರ ವೈಡೂರ್ಯ: ಈಶ್ವರಪ್ಪ ಟೀಕೆ

Malenadu Mirror Desk

ವಿಜಯೇಂದ್ರ ವಿರುದ್ಧ ಸಿ.ಟಿ. ರವಿಯ ಅಸಮಾಧಾನ ಏನು?
ಅಂದು ಬಿಬಿ ಶಿವಪ್ಪ, ಯತ್ನಾಳ್, ಈಗ ಸೋಮಣ್ಣ ಬಂಡೆದ್ದಿದ್ದರ ಹಿನ್ನೆಲೆ ಏನು ಗೊತ್ತಾ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.