ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ
ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ.
ಬೆಂಗಳೂರಿನಿಂದ ಸಾಗರ ಕಡೆಗೆ ಕೆಟಿಎಂ ಬೈಕ್ ನಲ್ಲಿ ಯುವಕರು ತೆರಳುತ್ತಿದ್ದರು ಎನ್ನಲಾಗಿದ್ದು, ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.