ಶಿವಮೊಗ್ಗ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಉದ್ಯೋಗ ಖಾತ್ರಿ ಕೆಲಸದ ವೇಳೆಯೇ ಸಂತಾಪ ಸೂಚಿಸಿ, ಗೌರವ ಸಲ್ಲಿಸಲಾಗಿದೆ.
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದ ಗ್ರಾಮಸ್ಥರು ಇಂದು ಬೆಳಿಗ್ಗೆ ದಿನದ ಉದ್ಯೋಗ ಖಾತ್ರಿ ಕೆಲಸ ಆರಂಭಿಸುವ ಮುನ್ನ ಮೌನಚರಣೆ ನಡೆಸಿ, ಮಾಜಿ ಪ್ರಧಾನಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ನರೇಗಾ ಕೂಡ ಒಂದು. ಬಡವರಿಗೆ ಜೀವನಾಧರ ಕಲ್ಪಿಸಲು ಮತ್ತು ಗ್ರಾಮೀಣ ಜನತೆಗೆ ವರ್ಷಕ್ಕೆ ಕನಿಷ್ಟ 100 ದಿನಗಳ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೆ ತಂದಿತ್ತು. ಇಂದಿಗೂ ಲಕ್ಷಾಂತರ ಮಂದಿ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇಂತಹ ಮಹತ್ವದ ಯೋಜನೆ ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿನ್ನೆ ರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಉದ್ಯೋಗ ಖಾತ್ರಿ ಕೆಲಸ ಆರಂಭಕ್ಕೂ ಮುನ್ನ ಗ್ರಾಮಸ್ಥರು ಗೌರವ ನಮನ ಸಲ್ಲಿಸಿದ್ದಾರೆ.
ಈ ವೇಳೆ ಗ್ರಾಮಸ್ಥರಾದ ಮುಕುಂದಪ್ಪ, ಶಿವಪ್ಪ, ಮಂಜುನಾಥ್, ರಮೇಶ್, ಧರ್ಮ, ಸೀತಾರಾಮ್, ಬೀರಪ್ಪ, ಅಣ್ಣಪ್ಪ ಸೇರಿದಂತೆ ಹಲವರಿದ್ದರು.
previous post