ಶಿವಮೊಗ್ಗ: ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ(65) ಮೃತ ದುರ್ದೈವಿ.
ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಬೆಳಿಗ್ಗೆ ಮನೆಯಿಂದ ರಿಪ್ಪನ್ ಪೇಟೆಗೆ ಹೋಗುತ್ತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಸಂಜೀವ್ ಅವರನ್ನು ಅದೇ ಮಾರ್ಗವಾಗಿ ಬರುತ್ತಿದ್ದ ಪಿಎಸ್ಐ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆಂಬ್ಯುಲೆನ್ಸ್ ಗೆ ಶಿಫ್ಟ್ ಮಾಡುವ ವೇಳೆ ಸಂಜೀವ್ ಮೃತಪಟ್ಟಿದ್ದಾರೆ.
ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.