ಶಿವಮೊಗ್ಗ: ಜಿಲ್ಲೆಯ ಆನಂದಪುರ ಸಮೀಪ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಬಸ್ಸು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಪ್ರಾಥಮಿಕ ಮಾಹಿತಿಯನುಸಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರು ಎನ್ನಲಾಗಿದೆ.
ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹಾಗೂ ಎರ್ಟಿಗಾ ಕಾರು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಮುರುಘಾಮಠ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
previous post