ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೆಣ್ಣು ಹುಲಿ ಸಾವನ್ನಪ್ಪಿದೆ.
‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿಯು ನಿನ್ನೆ ರಾತ್ರಿ ಮೃಗಾಲಯದಲ್ಲಿ ಮೃತಪಟ್ಟಿದೆ.
17 ವರ್ಷ ವಯಸ್ಸಿನ ಅಂಜನಿ ಎಂಬ ಹೆಣ್ಣು ಹುಲಿಯು ವಯೋ ಸಹಜವಾದ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದೆ.
ಪಶು ವೈದ್ಯಕೀಯ ಕಾಲೇಜಿನ ಪಶುವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ತ್ಯಾವರೆಕೊಪ್ಪ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.