ಶಿವಮೊಗ್ಗ: ಅಣ್ಣನೇ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.
ಗಿರೀಶ್(30) ಕೊಲೆಯಾದ ತಮ್ಮ.
ಇಂದು ಬೆಳಿಗ್ಗೆ ಅಣ್ಣ ಲೋಕೇಶ್ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದು, ತೀವ್ರ ರಕ್ತಸ್ರಾವದಿಂದ ತಮ್ಮ ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಆರೋಪಿ ಲೋಕೇಶ್ ನನ್ನ ವಶಕ್ಕೆ ಪಡೆದಿದ್ದಾರೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯನ್ನ ಮುಂದುವರೆಸಿದ್ದಾರೆ.
previous post