ಶಿವಮೊಗ್ಗ: ಆರೋಗ್ಯ ಸಮಸ್ಯೆಯಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ಸೌಮ್ಯ(25) ಮೃತ ಯುವತಿ.
ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಸಮೀಪದ ವಿಜಯನಗರ 4ನೇ ಮುಖ್ಯರಸ್ತೆಯಲ್ಲಿನ ಮನೆಯಲ್ಲಿ ಯುವತಿ ನೇಣಿಗೆ ಶರಣಾಗಿದ್ದಾಳೆ.
ವಿಜಯನಗರದಲ್ಲಿ ಪೋಷಕರೊಂದಿಗೆ ವಾಸವಿದ್ದ ಸೌಮ್ಯ, ಬಿಕಾಂ ವ್ಯಾಸಂಗದ ಬಳಿಕ ಕಳೆದ 3 ವರ್ಷದಿಂದ ಮಾಚೇನಹಳ್ಳಿಯಲ್ಲಿರುವ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಕೆಲ ವರ್ಷದಿಂದ ಉಸಿರಾಟ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೌಮ್ಯಳಿಗೆ ಪೋಷಕರು, ಶಿವಮೊಗ್ಗದ ಮೆಗ್ಗಾನ್ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಸಹ ಚಿಕಿತ್ಸೆ ಕೊಡಿಸಿದ್ದರು.ಹೀಗಿದ್ದರೂ ಉಸಿರಾಟ ಸಮಸ್ಯೆ ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಸೌಮ್ಯ, ನಿನ್ನೆ ಸಂಜೆ ಮನೆಯಲ್ಲಿ ಯಾರಿರದ ವೇಳೆ ತನ್ನ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲಸಕ್ಕೆಂದು ಹೋಗಿದ್ದ ಸೌಮ್ಯ ಸಹೋದರ ಹಾಗೂ ಪೋಷಕರು ಮನೆಗೆ ಬಂದು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದಿದ್ದು, ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ, ವೈದ್ಯರು ಆಕೆ ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ.
ಈ ಘಟನೆ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.


