Malenadu Mitra
ಜಿಲ್ಲೆಹೊಸನಗರ

ಹುಲ್ಲು ಸಾಗಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ : ಲಾರಿ ಸಂಪೂರ್ಣ ಭಸ್ಮ

ಹೊಸನಗರ : ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು , ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಆಯನೂರು ಮೂಲದ ವ್ಯಕ್ತಿಯೊಬ್ಬ ಕಣಬಂದೂರು , ಕರಡಿಗ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಒಣ ಹುಲ್ಲನ್ನು ಖರೀದಿಸಿ ಕೊಂಡೊಯ್ಯುತಿದ್ದಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಬೆಂಕಿ ಜ್ವಾಲೆ ಎಲ್ಲಾ ಕಡೆ ಹಬ್ಬಿಕೊಂಡಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆ ನಂತರ ಹೊಸನಗರ ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಆ ವೇಳೆಗಾಗಲೇ ಲಾರಿ ಹಾಗೂ ಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು.

Ad Widget

Related posts

ರಿಪ್ಪನ್‌ಪೇಟೆಯಲ್ಲಿ ಕೊರೊನಾ ಆರೈಕೆ ಕೇಂದ್ರ

Malenadu Mirror Desk

ಮಾಚಿದೇವ ಸರ್ವಕಾಲಕ್ಕೂ ಆದರ್ಶಪ್ರಾಯರು: ಸುಧಾಕರ್

Malenadu Mirror Desk

ಸಾಂಸ್ಕೃತಿಕ ವೈಭವದಲ್ಲಿ ಮೇಳೈಸಿದ ದೀವರ ಕಲಾ ಸೌರಭ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.