ಶಿವಮೊಗ್ಗ: ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಮೂವರ ಶವ ಪತ್ತೆಯಾಗಿವೆ.
ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ.
ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.