ಶಿವಮೊಗ್ಗ : ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಏ.7 ರಂದು ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಏ.7 ರ ಸೋಮವಾರ ಬೆಳಿಗ್ಗೆ 8ಗಂಟೆಗೆ ಶ್ರಮದಾನ ಆಯೋಜಿಸಿದ್ದು, ಯೋಜನೆ ಮತ್ತ ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ – ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ನರೇಗಾ ಯೋಜನೆಯನ್ನ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಪರಿಣಾಮಕಾರಿಯಾಗಿ ಜಾರಿಗೆ ತಂದು ದುಡಿಯುವ ಕೈಗಳಿಗೆ ಉದ್ಯೋಗದ ಜೊತೆಗೆ ರಾಷ್ಟ್ರೀಯ ಸಾಕ್ಷರತಾ ಆಂದೋಲನಕ್ಕೂ ಸಹ ನಾಂದಿ ಹಾಡಿದ್ದರು. ಇಂತಹ ಅಭೂತಪೂರ್ವ ಶ್ರಮದಾನದ ಕಾರ್ಯಕ್ರಮವನ್ನ ಮತ್ತೊಮ್ಮೆ ಸೊರಬದಲ್ಲಿ ಆಯೋಜಿಸಲಾಗಿದ್ದು, ಎಲ್ಲರೂ ಕೂಡ ತಪ್ಪದೇ( ಗುದ್ದಲಿ ಹಾಗೂ ಬುಟ್ಟಿ ತರುವುದನ್ನು ಮರೆಯಬೇಡಿ) ಭಾಗವಹಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.