Malenadu Mitra
ರಾಜ್ಯಶಿವಮೊಗ್ಗ

ಕಳಪೆ ಕಾಮಗಾರಿ ಗುತ್ತಿಗೆ ಬಿಲ್‌ಗೆ ತಡೆಮಹಾನಗರಪಾಲಿಕೆ ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

ಶಿವಮೊಗ್ಗ: “ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಗುಣಮಟ್ಟವಿಲ್ಲದ ಕಾಮಗಾರಿಗಳ ಗುತ್ತಿಗೆದಾರರ ಬಿಲ್ ತಡೆಹಿಡಿಯಬೇಕು ಹಾಗೂ ನಿರ್ಲಕ್ಷ್ಯ ತೋರಿದ ಎಂಜಿನಿಯರ್‌ಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ  ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ವಿವಿಧೆಡೆ ನಡೆಯುತ್ತಿರುವ ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಾಣಿಸುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಹೆಚ್ಚಿದ ಹಿನ್ನೆಲೆಯಲ್ಲಿ, ಶಾಸಕರು ಇಂದು ಪಾಲಿಕೆ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆ ಸೇರಿದಂತೆ ವಿವಿಧ ಹಂತದ ಕಾಮಗಾರಿಗಳ ತುರ್ತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯ ನಂತರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಎಂಜಿನಿಯರ್‌ಗಳ ತಂಡದೊಂದಿಗೆ ಖುದ್ದಾಗಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, “ಕೇವಲ ಕಚೇರಿಯಲ್ಲೇ ಕುಳಿತು ಕಡತಗಳನ್ನು ವಿಲೇವಾರಿ ಮಾಡುವುದನ್ನು ಬಿಟ್ಟು ಎಂಜಿನಿಯರ್‌ಗಳು ಸ್ಥಳದಲ್ಲೇ ಹಾಜರಿದ್ದು ಕಾಮಗಾರಿಯ ಮೇಲ್ವಿಚಾರಣೆ ನಡೆಸಬೇಕು. ನಗರದ ಜನತೆಗೆ ದೀರ್ಘಕಾಲ ಬಾಳಿಕೆ ಬರುವ ರಸ್ತೆ ಹಾಗೂ ಮೂಲಸೌಕರ್ಯ ಒದಗಿಸುವುದು ನಮ್ಮ ಆದ್ಯತೆಯಾಗಿದ್ದು, ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಮುಗಿಸಬೇಕು,” ಎಂದು ಎಚ್ಚರಿಕೆ ನೀಡಿದರು. ಪರಿಶೀಲನಾ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಡಾ.ಮಾಯಣ್ಣಗೌಡ, ನಾಗರೀಕ ಸಮಿತಿಯ ಕೆ.ವಿ.ವಸಂತಕುಮಾರ್‌, ಅಧಿಕಾರಿಗಳು ಪಾಲಿಕೆಯ ಎಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Ad Widget

Related posts

ಹೆಡಗೇವಾರ್ ಅವರನ್ನು ಪಠ್ಯ ಸೇರ್ಪಡೆ ಮಾಡಿದರೆ ತಪ್ಪೇನು?  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಪ್ರಶ್ನೆ

Malenadu Mirror Desk

ಮಠಗಳಿಂದ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ: ಡಾ.ಮಹಾಂತ ಸ್ವಾಮೀಜಿ

Malenadu Mirror Desk

ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

Malenadu Mirror Desk
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.