Malenadu Mitra
ರಾಜ್ಯ ಶಿವಮೊಗ್ಗ

ಹರ್ಷಕೊಲೆ ಪ್ರಕರಣ ಎನ್‌ಐಎಗೆ ವಹಿಸಿ ಪೊಲೀಸರ ವೈಫಲ್ಯವೇ ಘಟನೆಗೆ ಕಾರಣ: ವಿಶ್ವಹಿಂದೂ ಪರಿಷತ್

ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ತನಿಖೆಯನ್ನು ಎನ್.ಐ.ಎ ಗೆ ವಹಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯಸರಕಾರಕ್ಕೆ ಒತ್ತಾಯಿಸಿದೆ.
ಶಿವಮೊಗ್ಗ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ವಾಸುದೇವ್ ಅವರು, ಹರ್ಷನ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರವಿದೆ. ಪಿಎಫ್‌ಐ,ಎಸ್‌ಡಿಪಿಐ ಮತ್ತು ಸಿಎಫ್‌ಐ ಸಂಘಟನೆಗಳ ಕೈವಾಡ ಇರುವ ಅನುಮಾನವಿದೆ. ರಾಷ್ಟ್ರೀಯ ತನಿಖಾದಳದಿಂದ ತನಿಖೆ ಮಾಡಿ ಅವರ ಕೈವಾಡ ಸಾಬೀತಾದಲ್ಲಿ ಈ ಸಂಘಟನೆಗಳನ್ನು ದೇಶದಲ್ಲಿ ನಿಷೇಧ ಮಾಡಬೇಕೆಂಬ ಒತ್ತಾಯವನ್ನು ನಾವು ಸರಕಾರಕ್ಕೆ ಮಾಡುತ್ತೇವೆ ಎಂದರು.
ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆಗೆ ಮತೀಯ ಶಕ್ತಿಗಳು ಪ್ರಯತ್ನ ಮಾಡುತ್ತಿವೆ ಎಂಬ ಮಾಹಿತಿ ಇತ್ತು. ಈ ಅಂಶವನ್ನು ಸ್ಥಳಿಯ ಪೊಲೀಸ್ ಠಾಣೆಗೆ ಹರ್ಷ ಕುಟುಂಬಸ್ಥರು ಮತ್ತು ಬಜರಂಗದಳ ಕಾರ್ಯಕರ್ತರು ನೀಡಿದ್ದರು. ಈಗ ಸಿಕ್ಕಿ ಬಿದ್ದಿರುವ ಆರೋಪಿಗಳ ಬಗ್ಗೆಯೂ ಮಾಹಿತಿ ನೀಡಲಾಗಿತ್ತು. ಆದರೆ ಪೊಲೀಸ್ ಇಲಾಖೆ ವೈಫಲ್ಯ ಇಲ್ಲಿ ಗೋಚರಿಸುತ್ತಿದೆ. ಈ ಬಗ್ಗೆ ಈಗಾಗಲೇ ಗೃಹ ಸಚಿವರು ತನಿಖೆ ಮಾಡುವುದಾಗಿ ಹೇಳಿದ್ದಾರೆ ಎಂದು ವಾಸುದೇವ್ ಹೇಳಿದರು.
ಶಿವಮೊಗ್ಗದಲ್ಲಿ ಹರ್ಷನ ಶವಯಾತ್ರೆ ಸಂದರ್ಭದಲ್ಲಿ ನಮ್ಮ ಸಂಘಟನೆಯ ಕಾರ್ಯಕರ್ತರಿಗೆ ಶಾಂತರೀತಿಯ ಮೆರವಣಿಗೆಗೆ ನಿರ್ದೇಶನ ನೀಡಲಾಗಿತ್ತು. ಆದರೆ ಸರಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಕಿಡಿಗೇಡಿಗಳು ಮೆರವಣಿಗೆ ಸಂದರ್ಭ ಕಲ್ಲುತೂರುವ ಪುಂಡಾಟಿಕೆ ಮಾಡಿದರು. ಮೆರವಣಿಗೆ ಮೇಲೆಯೂ ಕೆಲವರು ಅಪ್ರಚೋದಿತವಾಗಿ ಕಲ್ಲುತೂರಿದ್ದಾರೆ. ಈ ಎಲ್ಲವನ್ನೂ ವಿಶ್ವಹಿಂದೂ ಪರಿಷತ್ ಖಂಡಿಸುತ್ತದೆ ಎಂದರು.
ಬಜರಂಗದಳ ಸಂಚಾಲಕ ನಾಗೇಶ್ ಗೌಡ ಮಾತನಾಡಿ, ನಮ್ಮ ಕಾರ್ಯಕರ್ತರನ್ನು ದೇಶ ಹಾಗೂ ದೇಶದ ಸಂಸ್ಕೃತಿಗಾಗಿ ಹೋರಾಟ ಮಾಡುತ್ತಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕೊಲೆ ಮಾಡುವ ಮೂಲಕ ಇಡೀ ಹಿಂದೂ ಸಮಾಜವನ್ನು ಹೆದರಿಸಬಹುದು ಎಂದು ತಿಳಿದುಕೊಂಡಿದ್ದರೆ ತಪ್ಪು. ನಮ್ಮ ಸಂಘಟನೆಗಳ ಹಿಂದೆ ಇಡೀ ದೇಶವಿದೆ. ಈ ನೆಲದ ಕಾನೂನು ಮತ್ತು ಸಂಸ್ಕಾರಕ್ಕೆ ಎಲ್ಲರೂ ಹೊಂದಿಕೊಂಡು ಹೋಗಬೇಕು. ಹರ್ಷನ ಕೊಲೆ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಇದೆ ಎಂದು ಆರೋಪಿಸಿದರು.
ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ನಟರಾಜ್, ಪ್ರಮುಖರಾದ ನಾರಾಯಣ ಹಾಜರಿದ್ದರು.

Ad Widget

Related posts

ಕುಂವೀ 70 ಕಥೆ 50 : ಕೃತಿ ಲೋಕಾರ್ಪಣೆ

Malenadu Mirror Desk

ಮಳೆನಾಡಾದ ಮಲೆನಾಡು, ಮೈದುಂಬುತ್ತಿರುವ ನದಿಗಳು

Malenadu Mirror Desk

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ: ೭೨ ಸಾವಿರ ರೂ. ವಂಚನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.