Malenadu Mitra
ರಾಜ್ಯಶಿವಮೊಗ್ಗ

ಕಾಂತರಾಜ್ ವರದಿ ಸ್ವೀಕರಿಸಲು ಹಿಂದುಳಿದ ವರ್ಗಗಳ ಒಕ್ಕೂಟ ಆಗ್ರಹ

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿಯನ್ನು ಸರ್ಕಾರ ಸ್ವೀಕರಿಸಿ ಜಿಪಂ ತಾಪಂ ಚುನಾವಣೆಗೆ ತಯಾರಿ ನಡೆಸಬೇಕು ಎಂದು ಜಿ ಹಿಂದುಳಿದ ಜಾತಿಗಳ ಒಕ್ಕೂಟದ ಸಂಚಾಲಕ ಆರ್.ಕೆ. ಸಿದ್ದರಾಮಣ್ಣ ಆಗ್ರಹಿಸಿದರು.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ೧೯೯೨ ಡಿಸೆಂಬರ್‌ನಲ್ಲಿ ಸಂವಿಧಾನದ ೭೩ ಮತ್ತು ೭೪ನೇ ತಿದ್ದುಪಡಿ ಮಾಡಿ, ಸಮಾಜದ ದುರ್ಬಲ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಬೇಕೆಂದು ಹೇಳಿದೆ. ಸರ್ಕಾರ ಕೂಡಲೇ ಸರ್ವೋಚ್ಚ ನ್ಯಾಯಾಲಯದ ೨೦೧೦ರ ಆದೇಶದಂತೆ ಮೀಸಲಾತಿ ಅನ್ವಯವೇ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡ ೨೭ರಷ್ಟು ಸ್ಥಾನಗಳನ್ನು ಮೀಸಲಿಡುವ ಕಾನೂನು ದೇಶದಲ್ಲಿ ಪ್ರಥಮ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದು ಮೀಸಲಾತಿ ನೀಡುತ್ತಿದೆ ಎಂದರು.
ಈಗ ಸುಪ್ರೀಂ ಕೋರ್ಟ್‌ನಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಕರಣ ನಡೆಯುತ್ತಿದೆ. ಸರ್ಕಾರ ಕೇಳಿದ ಹಲವು ಪ್ರಶ್ನೆಗಳಿಗೆ ಹಿಂದುಳಿದ ವರ್ಗಗಳ ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ಉತ್ತರ ನೀಡಲಿದೆ. ಹಾಗಾಗಿ ಸರ್ಕಾರ ಕೂಡಲೇ ಈಗಾಗಲೇ ಸಿದ್ಧವಾಗಿರುವ ವೈeನಿಕ ಮಾಹಿತಿಯನ್ನು ಒಳಗೊಂಡಿರುವ ಜನಗಣತಿ ಸಮೀಕ್ಷೆಯನ್ನು ಸ್ವೀಕರಿಸಿ ನ್ಯಾಯಾಲಯಕ್ಕೆ ಒದಗಿಸಿ, ಸಾಮಾಜಿಕ ನ್ಯಾಯ, ರಾಜಕೀಯ ನ್ಯಾಯ ಒದಗಿಸಬೇಕು. ಸರ್ವರಿಗೂ ಸಮಬಾಳು ಸಮಪಾಲು ನೀಡುವ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಹಿಂದುಳಿದ ಜಾತಿಗಳ ಒಕ್ಕೂಟ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದರು.
ಜಿಧ್ಯಕ್ಷ ವಿ. ರಾಜು ಮಾತನಾಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸದ್ಯದಲ್ಲಿಯೇ ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ಕರೆದುಕೊಂಡು ಹೋಗಿ ಸಂಬಂಧಪಟ್ಟ ಸಚಿವರು ಹಾಗೂ ಜನಪ್ರತಿನಿಧಿಗಳನ್ನು ಅಧಿಕೃತವಾಗಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಮತ್ತು ಜಿಪಂ ತಾಪಂ ಚುನಾವಣೆಗೆ ತಯಾರಿ ನಡೆಸಿ ಕಾಲಕಾಲಕ್ಕೆ ನಡೆಯುವ ತಾಪಂ, ಜಿಪಂ ಚುನಾವಣೆಗಳನ್ನು ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂವಿಧಾನದ ಆಶಯದಂತೆ ಶೈಕ್ಷಣಿಕ ಹಾಗೂ ಸಾಮಾಜಿಕ ಮೀಸಲಾತಿಯ ಜೊತೆಗೆ ರಾಜಕೀಯ ಮೀಸಲಾತಿಯೂ ಹಿಂದುಳಿದ ವರ್ಗಗಳಿಗೆ ಸಿಗಬೇಕು. ಮೀಸಲಾತಿ ಬಗ್ಗೆ ಯಾವುದೇ ಭೀತಿ ಬೇಡ. ಮೀಸಲಾತಿ ಇಲ್ಲದೆ ಸಾಮಾಜಿಕ ಸಮಾನತೆ ಕಾಣಲು ಸಾಧ್ಯವಿಲ್ಲ. ರಾಜ್ಯದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಹಿಂದುಳಿದ ಜಾತಿಗಳಿವೆ. ಆ ಬಗ್ಗೆ ಸಂಪೂರ್ಣ ವಿವರ ಜನಗಣತಿಯಲ್ಲಿ ಇದೆ. ಆದ್ದರಿಂದ ಸಾಮಾಜಿಕ, ಶೈಕ್ಷಣಿಕ ವರದಿ ಅವಶ್ಯಕ ವಿದ್ದು, ಸರ್ಕಾರ ಈ ಬಗ್ಗೆ ತಕ್ಷಣವೇ ಸ್ವೀಕಾರ ಮಾಡಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳಾದ ಎಸ್.ಬಿ. ಅಶೋಕ್ ಕುಮಾರ್, ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್, ಎಸ್.ವಿ. ರಾಜಮ್ಮ, ರಾಜೇಶ್,ಸುಮಿತ್ರ ರಂಗನಾಥ್, ಚಂದ್ರಶೇಖರ್ ಇದ್ದರು.

Ad Widget

Related posts

ವಾಜಪೇಯಿ ಬಡಾವಣೆ ಫಲಾನುಭವಿಗಳಿಗೆ ನಿವೇಶನ ಖಾತಾ ಪತ್ರ ಹಂಚಿಕೆ

Malenadu Mirror Desk

24 ಕೋಟಿ ಲಾಟರಿ ಯಾರಿಗೆ ಗೊತ್ತೇನ್ರಿ.. ?

Malenadu Mirror Desk

ಮುಳುಗಡೆ ಸಂತ್ರಸ್ಥರ ಮುಂದುವರಿದ ಪ್ರತಿಭಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.