Malenadu Mitra
ರಾಜ್ಯ ಶಿವಮೊಗ್ಗ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಆನವಟ್ಟಿಲ್ಲಿ ಪ್ರತಿಭಟನೆ ಖಾಸಗಿಯವರಿಗೆ ವಿದ್ಯುತ್ ಮಾರಾಟದ ಅನುಮಾನವಿದೆ: ಮಧುಬಂಗಾರಪ್ಪ ಆರೋಪ

ರಾಜ್ಯಕ್ಕೆ ವಿದ್ಯುತ್ ಪೂರೈಸುವ ಶಿವಮೊಗ್ಗ ಜಿಲ್ಲೆಯಲ್ಲಿ ಸಮರ್ಪಪ ವಿದ್ಯುತ್ ಇಲ್ಲದೆ ರೈತರ ಬೆಳೆಗಳು ಒಣಗುತ್ತಿವೆ. ಸೊರಬ ತಾಲೂಕಿನ ವಿವಿಧ ಭಾಗದಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಈ ವರ್ಷಪೂರ್ತಿ ಮಳೆಯಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ರೈತರಿಗೆ ವಿದ್ಯುತ್ ಸಿಗುತ್ತಿಲ್ಲ. ಖಾಸಗಿಯವರಿಗೆ ವಿದ್ಯುತ್ ಮಾರಾಟ ಮಾಡುತ್ತಿದ್ದಾರಾ ಎಂಬ ಅನುಮಾನ ಮೂಡಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ ರೈತರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದೆ ಬಂಗಾರಪ್ಪನವರು ರೈತರಿಗ ಉಚಿತವಾಗಿ ವಿದ್ಯುತ್ ನೀಡುತ್ತಿದ್ದರು. ವಿದ್ಯುತ್ ಕೊರತೆ ಮಾಡಿ, ನಾವು ದುಡ್ಡು ಕೊಡುತ್ತೇವೆ ವಿದ್ಯುತ್ ಕೊಡಿ ಎಂದು ರೈತರಿಂದ ಹೇಳಿಸಲು ಹೊರಟಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತೆ. ಆದರೆ, ಜಿಲ್ಲೆಯಲ್ಲಿ ವಿದ್ಯುತ್ ಕೊರತೆ ಎದುರಾಗಿದೆ.
ಕಳೆದ ಸರ್ಕಾರದ ಅವಧಿಯಲ್ಲಿ ಘೋಷಿಸಿದ ಪವರ್ ಗ್ರಿಡ್‌ಗಳೇ ಇನ್ನೂ ಪೂರ್ಣಗೊಂಡಿಲ್ಲ. ಅದರಲ್ಲೂ ಎಲ್ಲಾದರೂ ಕಮಿಷನ್‌ಸಿಗುತ್ತಾ ಎಂದು ಯೋಚನೆ ಮಾಡುತ್ತಿದ್ದಾರೆ. ಟ್ರಾನ್ಸ್‌ಫಾರ್ಮರ್ ಸುಟ್ಟು ಹೋದರೂ, ವಾರಗಟ್ಟಲೇ ಸರಿಯಾಗಲ್ಲ. ದಿನದಲ್ಲಿ ನಾಲ್ಕು ಗಂಟೆ ವಿದ್ಯುತ್ ನೀಡಿದರೂ, ನಾಲ್ಕು ಸರಿ ಹೋಗಿ ಬರುತ್ತೆ. ಹೀಗಾದರೆ, ಬೆಳೆ ಬೆಳೆದ ರೈತರ ಪರಿಸ್ಥಿತಿ ಏನಾಗಬೇಕು. ಇನ್ನು ಮುಂದಾದರೂ ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿದ ಅವರು, ಸರಕಾರದ ನಿರ್ಲಕ್ಷ್ಯ ಮಂದುವರಿದರೆ ನಿರಂತರ ಹೋರಾಟ ಮಾಡಲಾಗುವುದು ಎಂದರು.

ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಬಡವರಿಗೆ ಭಾಗ್ಯ ಜ್ಯೋತಿ ನೀಡಿರುವುದು, ಗ್ರಾಮೀಣ ಕೃಪಾಂಕ, ಅನ್ನಭಾಗ್ಯ, ಕ್ಷೀರ ಭಾಗ್ಯ ನೀಡಿರುವುದು ಕಾಂಗ್ರೆಸ್ ಪಕ್ಷ. ಬರೀ ಪೊಳ್ಳು ಭರವಸೆ ನೀಡುತ್ತಿರುವ ಬಿಜೆಪಿ ಸರಕಾರ ರೈತವಿರೋಧಿಯಾಗಿದೆ. ಕಳೆದ ಎರಡುವರೆ ವರ್ಷದಲ್ಲಿ ಬಿಜೆಪಿಯ ಒಂದಾದರೂ ಜನಪರ ಯೋಜನೆಯನ್ನು ಜಾರಿ ಮಾಡಿದೆಯಾ ಎಂದು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂಧನ ಸಚಿವರಿದ್ದಾಗ ವಿದ್ಯುತ್ ಸಮಸ್ಯೆಗಳಿಗೆ ಸ್ಪಂದಿಸಿ ಹಲವು ಸುಧಾರಣೆ ತಂದಿದ್ದರು. ಆ ಸುಧಾರಣೆಯನ್ನ ಬಳಸಿಕೊಂಡು ಸಮಗ್ರ ವಿದ್ಯುತ್ ಪೂರೈಸಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲವೆಂದು ಆರೋಪಿಸಿದರು.
ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ.ಪಾಟೀಲ್, ತಬಲಿ ಬಂಗಾರಪ್ಪ , ಕೆ.ಪಿ.ರುದ್ರೇಗೌಡ, ಗಣಪತಿ ಹುಲ್ತಿಕೊಪ್ಪ, ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Ad Widget

Related posts

ಸೋಲುವ ಹತಾಷೆಯಿಂದ ಸಿದ್ದರಾಮಯ್ಯ ಆಪಾದನೆ: ಸಿ.ಟಿ ರವಿ

Malenadu Mirror Desk

ಮಾಜಿ ಡಿಸಿಎಂ ಈಶ್ವರಪ್ಪಗೆ ಮತ್ತೆ ಸಂಕಷ್ಟ : ಕೋಟೆ ಠಾಣೆಯಲ್ಲಿ ಸುಮೋಟೊ ಕೇಸ್

Malenadu Mirror Desk

ಕೆ.ಇ.ಕಾಂತೇಶ್ ಬಿರುಸಿನ ಪ್ರಚಾರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.