ಬಿಜೆಪಿ 42 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಶೋಭಾಯಾತ್ರೆ ನಡೆಸಲಾಯಿತು.
ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಲ್ಲಿ ಶೋಭಯಾತ್ರೆಗೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ಯಾತ್ರೆ ಶಿವಪ್ಪನಾಯಕ ವೃತ್ತ, ಎಎ ವೃತ್ತ, ನೆಹರೂ ರಸ್ತೆ, ಗೋಪಿ ವೃತ್ತದ ಮೂಲಕ ಕಸ್ತೂರ ಬಾ ಕಾಲೇಜ್ ರಸ್ತೆಯಲ್ಲಿ ಸಾಗಿ ವೀರಶೈವ ಕಲ್ಯಾಣ ಮಂದಿರ ತಲುಪಿತು.
ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರು, ಮುಖಂಡರು, ಜನಪ್ರತಿನಿಧಿಗಳನ್ನು ಉದ್ದೇಶಿಸಿ ವರ್ಚಯಲ್ ಸಭೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು. ಈ ಕಾರ್ಯಕ್ರಮ ವೀಕ್ಷಣೆಗೆ ವೀರಶೈವ ಕಲ್ಯಾಣ ಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಬಿಜೆಪಿ ಸ್ಥಾಪನೆಗೊಂಡು ಇಂದಿಗೆ ೪೨ ವರ್ಷಗಳಾಗಿವೆ. ನಮ್ಮ ಹಿರಿಯ ನಾಯಕರ ಮಾರ್ಗದರ್ಶನ, ಕಾರ್ಯಕರ್ತರ ಶ್ರಮದಿಂದಾಗಿ ಪಕ್ಷ ಬೃಹತ್ ಆಗಿ ಬೆಳೆದಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಿವಮೊಗ್ಗದಲ್ಲಿ ಬಿಜೆಪಿಯವರು ಅಶಾಂತಿ ಸೃಷ್ಠಿಸುತ್ತಿದ್ದಾರೆ ಎಂದು ಆರೋಪ ಮಾಡಿದರುವುದರಲ್ಲಿ ಹುರುಳಿಲ್ಲ. ಶಿವಮೊಗ್ಗದಲ್ಲಿ ಶಾಂತಿ ನೆಲೆಸಿದೆ. ಅವರು ರಾಜಕಾರಣಕ್ಕಾಗಿ ಇಂತಹ ಹೇಳಿಕೆ ನೀಡಿದ್ದಾರೆಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅವಧಿ ಪೂರ್ಣಗೊಳಿಸುತ್ತಾರೆ. ಜಿ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಬಿಜೆಪಿ ಸನ್ನದ್ಧವಾಗಿದೆ. ಮೀಸಲಾತಿ ಕುರಿತಂತೆ ಸಮಿತಿ ವರದಿ ನೀಡಿದ ನಂತರ ಚುನಾವಣೆ ನಡೆಯಲಿದೆ ಎಂದರು.
ಸಭೆಯಲ್ಲಿ ಬಿಜೆಪಿ ಜಿಧ್ಯಕ್ಷ ಟಿ.ಡಿ. ಮೇಘರಾಜ್, ಮೇಯರ್ ಸುನೀತಾ ಅಣ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಮಾಜಿ ಸದಸ್ಯರಾದ ಆರ್.ಕೆ.ಸಿದ್ಧರಾಮಣ್ಣ, ಎಂ.ಬಿ. ಭಾನುಪ್ರಕಾಶ್, ಉಪಮೇಯರ್ ಶಂಕರ್ ಗನ್ನಿ, ಸೂಡಾ ಅಧ್ಯಕ್ಷ ನಾಗರಾಜ್, ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ, ಕೆ.ವಿ.ಅಣ್ಣಪ್ಪ, ಜಗದೀಶ್, ಸಂತೋಷ್ ಬಳ್ಳೆಕೆರೆ, ವಿನ್ಸೆಂಟ್ ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.